ADVERTISEMENT

ಎಐ ಚಿತ್ರ ಬಳಸಿ ವಿಡಿಯೊ: ಯೂಟ್ಯೂಬರ್‌ ಸಮೀರ್‌ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 12 ಜುಲೈ 2025, 18:55 IST
Last Updated 12 ಜುಲೈ 2025, 18:55 IST
ಸಮೀರ್‌ ಎಂ.ಡಿ 
ಸಮೀರ್‌ ಎಂ.ಡಿ    

ಮಂಗಳೂರು: ‘ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಮೂಲಕ ಸೃಷ್ಟಿಸಲಾದ ಕಾಲ್ಪನಿಕ, ಸುಳ್ಳು ಮಾಹಿತಿಯನ್ನೊಳಗೊಂಡ ವಿಡಿಯೊವನ್ನು ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಸಾರ ಮಾಡಿ, ಸಾರ್ವಜನಿಕರು ಪ್ರಚೋದನೆ ಗೊಳ್ಳುವಂತೆ ಮಾಡಿದ ಕಾರಣಕ್ಕಾಗಿ ಯೂಟ್ಯೂಬರ್‌ ಸಮೀರ್‌ ಎಂ.ಡಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಈ ಪ್ರಕರಣದಲ್ಲಿ ಸಾಕ್ಷಿ ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ, ಇತರೆ ಮಾಹಿತಿಯನ್ನೊಳಗೊಂಡ, ಕಾಲ್ಪನಿಕವಾಗಿ ಸೃಷ್ಟಿಸಲಾದ ಸುಳ್ಳು ಮಾಹಿತಿಯ ವಿಡಿಯೊವನ್ನೂ ಈತ ಪ್ರಸಾರ ಮಾಡಿದ್ದು, ಈ ಕಾರಣಕ್ಕಾಗಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT