ಮಂಗಳೂರು: ಇಲ್ಲಿನ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳೂರು ಕಮಿಷನರೇಟ್‌ನ ಪೊಲೀಸ್ ಠಾಣೆಗಳ ವ್ಯಾಪ್ತಿಯ 262 ರೌಡಿಗಳ ಪರೇಡ್ ಗುರುವಾರ ನಡೆಯಿತು.
‘ಇನ್ನು ಮುಂದೆ ಅಪಾರಾಧಿಕ ಕೃತ್ಯಗಳಲ್ಲಿ ತೊಡಗಿದರೆ ಕಾನೂನು ಪ್ರಕಾರ ಕಠಿಣ ಕ್ರಮ ಎದುರಿಸ ಬೇಕಾ ಗುತ್ತದೆ’ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಎಚ್ಚರಿಕೆ ನೀಡಿದರು.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ ಗೋಯಲ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಬಿ.ಪಿ.ದಿನೇಶ್ ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.