ಸಾವು
(ಪ್ರಾತಿನಿಧಿಕ ಚಿತ್ರ)
ಮಂಗಳೂರು: ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ಸಮೀಪ ಅಂಡರ್ ಪಾಸ್ ಬಳಿ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಭಾನುವಾರ ಮೃತಪಟ್ಟಿದ್ದಾರೆ.
ಮೃತರನ್ನು ರಮೇಶ್ (63) ಎಂದು ಗುರುತಿಸಲಾಗಿದೆ. ಅವರು ಶನಿವಾರ ರಾತ್ರಿ ಯಕ್ಷಗಾನ ನೋಡಲು ಮಾಲೆಮಾರ್‌ಗೆ ತೆರಳಿದ್ದರು. ಮನೆಗೆ ಮರಳುವಾಗ ಯಾವುದೋ ವಾಹನ ಡಿಕ್ಕಿ ಹೊಡೆದಿತ್ತು. ಮೃತರ ಸಹೋದರ ದೂರು ನೀಡಿದ್ದು, ಸಂಚಾರ ಉತ್ತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.