ಮಂಗಳೂರು: ‘ಚೀಫ್ ಮಿನಿಸ್ಟರ್ಸ್ ಮಂಗಳೂರು’ ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ ಬ್ಯಾಡ್ಮಿಂಟನ್ ಟೂರ್ನಿ ಅ.27ರಿಂದ ನ.2ರ ವರೆಗೆ ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್, ಭಾರತ ಬ್ಯಾಡ್ಮಿಂಟನ್ ಫೆಡರೇಷನ್, ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯ ಸಹಯೋಗದಲ್ಲಿ ನಡೆಯುವ ಟೂರ್ನಿಯಲ್ಲಿ 12 ದೇಶಗಳ ಆಟಗಾರರು ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು’ ಎಂದರು.
ಟೂರ್ನಿಗೆ ಒಟ್ಟು ₹2.5 ಕೋಟಿ ವೆಚ್ಚವಾಗಲಿದ್ದು, ರಾಜ್ಯ ಸರ್ಕಾರ ₹1 ಕೋಟಿ ನೆರವು ನೀಡಿದೆ ಎಂದು ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಸಂಸ್ಥೆಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.