ADVERTISEMENT

ಮಂಗಳೂರು | ಮಸೀದಿ ಬಳಿ ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆ: ಎಫ್‌ಐಆರ್ ದಾಖಲು

ಫೇಸ್‌ ಬುಕ್‌ನಲ್ಲಿ ಕಮೆಂಟ್ ಹಾಕಿದ ವ್ಯಕ್ತಿಗಾಗಿ ಪೊಲೀಸರ ಶೋಧ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2026, 11:46 IST
Last Updated 2 ಮಾರ್ಚ್ 2026, 11:46 IST
<div class="paragraphs"><p>ಎಫ್‌ಐಆರ್</p></div>

ಎಫ್‌ಐಆರ್

   

ಮಂಗಳೂರು: ‘ಸಪೋರ್ಟ್‌ ಮಾಡಿ ಬ್ರೋ. ಉಳ್ಳಾಲ ಮಸೀದಿ ಹತ್ತಿರ ಬಾಂಬ್‌ ಬ್ಲಾಸ್ಟ್‌ ಮಾಡುತ್ತೇನೆ’ ಎಂದು ಫೇಸ್‌ ಬುಕ್‌ನಲ್ಲಿ ಬರೆದುಕೊಂಡ ವ್ಯಕ್ತಿ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಹುಡುಕುತ್ತಿದ್ದಾರೆ.

ಫೇಸ್‌ಬುಕ್‌ನಲ್ಲಿ ಬೇರೊಬ್ಬರು ಹಂಚಿಕೊಂಡ ಪೋಸ್ಟ್‌ಗೆ ‘ಶಂಕರ್‌11916’ ಎಂಬ ಖಾತೆಯನ್ನು ಬಳಸಿ ಈ ರೀತಿ ಕಮೆಂಟ್‌ ಮಾಡಲಾಗಿದೆ. ಮೊಹಮ್ಮದ್ ರಿಯಾಜ್ ಕಡಂಬು ಅವರು ಈ ಕುರಿತು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡು, ‘ಆರೋಪಿಯನ್ನು ಪೊಲೀಸರು ಕೂಡಲೇ ಬಂಧಿಸುತ್ತಾರೆ ಎಂದು ಭಾವಿಸುತ್ತೇನೆ. ಯಾವುದಕ್ಕೂ ಉಳ್ಳಾಲ ಮಸೀದಿಗಳ ಬಳಿ ಬಾಂಬ್ ಪತ್ತೆ ದಳವನ್ನು ಕಳುಹಿಸಿ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಬೇಕು‘ ಎಂದು ಒತ್ತಾಯಿಸಿದ್ದರು.

ADVERTISEMENT

‘ಈ ಮಾಹಿತಿ ಹಂಚಿಕೊಂಡಿದ್ದಕ್ಕೆ ಧನ್ಯವಾದ ತಿಳಿಸಿರುವ ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್ ರೆಡ್ಡಿ, ‘ಉಳ್ಳಾಲ ಮಸೀದಿ ಬಳಿ ಬಾಂಬ್‌ ಸ್ಫೋಟಿಸುತ್ತೇನೆ ಎಂಬ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು ಅಪರಾಧ. ಉಳ್ಳಾಲ ಠಾಣೆಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಶೀಘ್ರವೇ ಬಂಧಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.