ಮಂಗಳೂರು:‘ಬಿಲ್ಲವರಆರಾಧ್ಯದೈವಕೋಟಿ ಚೆನ್ನಯರುಮತ್ತು ಕಾಂಗ್ರೆಸ್‌ಹಿರಿಯ ಮುಖಂಡಜನಾರ್ದನಪೂಜಾರಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ ₹1ಲಕ್ಷ ಬಹುಮಾನ ನೀಡುತ್ತೇನೆ’ ಎಂದು ಕಾಂಗ್ರೆಸ್ ನಾಯಕಿ, ಪಾಲಿಕೆಯ ಮಾಜಿ ಸದಸ್ಯೆ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.
ಫೇಸ್‌ಬುಕ್‌ನಲ್ಲಿ ವಿಡಿಯೊ ಅಪ್‌ಲೋಡ್ ಮಾಡಿರುವ ಅವರು, ‘3 ದಿನಗಳಲ್ಲಿ ಜಗದೀಶ್ ಅಧಿಕಾರಿ ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ಬಿಲ್ಲವ ಸಮುದಾಯದ ಯಾರಾದರೂ ಅವರ ಮುಖಕ್ಕೆ ಮಸಿ ಬಳಿಯಿರಿ. ₹1ಲಕ್ಷ ಬಹುಮಾನ ನೀಡುತ್ತೇನೆ’ ಎಂದು ಹೇಳಿದ್ದಾರೆ.
‘ಜಗದೀಶ್ ಅಧಿಕಾರಿಯನ್ನು ಬಿಜೆಪಿ ಕೂಡಲೇ ಉಚ್ಚಾಟಿಸಬೇಕು. ಇಲ್ಲದಿದ್ದರೆ ಮುಂದಿನ ಚುನಾವಣೆಯಲ್ಲಿ ಏನು ಮಾಡಬೇಕು ಎಂಬುದನ್ನು ಬಿಲ್ಲವರು ಯೋಚಿಸಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.