ADVERTISEMENT

ಧರ್ಮಸ್ಥಳ ಪ್ರಕರಣ: ದಟ್ಟ ಕಾನನದೊಳಗೆ ಎರಡನೇ ಜಾಗದಲ್ಲಿ ಉತ್ಖನನ ಆರಂಭ

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 7:36 IST
Last Updated 30 ಜುಲೈ 2025, 7:36 IST
   

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹ ಪತ್ತೆಗಾಗಿ ಜಾಗ ಅಗೆಯುವ ಕಾರ್ಯ ಬುಧವಾರವೂ ಮುಂದುವರಿದಿದೆ.

ಈ ಪ್ರಕರಣದ ಸಾಕ್ಷಿ ದೂರುದಾರ ನೇತ್ರಾವತಿ ನದಿ ಪಕ್ಕದ ದಟ್ಟ ಕಾಡಿನ ಒಳಗೆ ತೋರಿಸಿದ್ದ ಎರಡನೇ ಜಾಗವನ್ನು ಅಗೆಯುವ ಕಾರ್ಯ ಆರಂಭವಾಗಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ತಲುಪುವುದಕ್ಕೆ ಹರಸಾಹಸ ಪಡಬೇಕಾದ ಈ ಜಾಗಕ್ಕೆ ನೆಲ ಅಗೆಯುವ ಯಂತ್ರವನ್ನು ಒಯ್ಯುವುದು ಕಷ್ಟಸಾಧ್ಯ. ಹಾಗಾಗಿ ಹೆಚ್ಚುವರಿ ಕಾರ್ಮಿಕರನ್ನು ಬಳಸಿಕೊಂಡೇ ಅಗೆಯಲು ವಿಶೇಷ ತನಿಖಾ ತಂಡ (ಎಸ್ಐಟಿ) ನಿರ್ಧರಿಸಿದೆ.

ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗವು ನೇತ್ರಾವತಿ ನದಿಯ ಪಕ್ಕದಲ್ಲೇ ಇತ್ತು. ಆ ಜಾಗದಲ್ಲಿ ಮಂಗಳವಾರ ಸುಮಾರು 8 ಅಡಿಗಳಷ್ಟು ಆಳಕ್ಕೆ ಅಗೆದಾಗಲೂ ಮೃತದೇಹಗಳನ್ನು ಹುಗಿದ ಯಾವುದೇ ಕುರುಹುಗಳು ಸಿಕ್ಕಿರಲಿಲ್ಲ.

ADVERTISEMENT

ಸಾಕ್ಷಿ ದೂರುದಾರ ತೋರಿಸಿದ ಎರಡನೇ ಜಾಗದಲ್ಲಿಯಾದರೂ ಈ ಕುರಿತ ಕುರುಹುಗಳು ಸಿಗಬಹುದೇ ಎಂದು ಎಸ್ಐಟಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ಪುತ್ತೂರಿನ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹಾಗೂ ಎಸ್ಐಟಿ ಎಸ್.ಪಿ ಜಿತೇಂದ್ರ ಕುಮಾರ್ ದಯಾಮ ಸ್ಥಳದಲ್ಲಿದ್ದು ಮಾರ್ಗದರ್ಶನ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.