ADVERTISEMENT

ಮಂಗಳೂರು| ಜಮೀನು ಪೋಡಿ;ನಿರ್ಲಕ್ಷ್ಯ ತೋರಿದರೆ ಶಿಸ್ತುಕ್ರಮ:ಜಿಲ್ಲಾಧಿಕಾರಿ ಮುಗಿಲನ್

ವಿಶೇಷ ಆಂದೋಲನದ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 6 ಮೇ 2025, 15:19 IST
Last Updated 6 ಮೇ 2025, 15:19 IST
ಮುಲ್ಲೈ ಮುಗಿಲನ್
ಮುಲ್ಲೈ ಮುಗಿಲನ್    

ಮಂಗಳೂರು: ದರಖಾಸ್ತು ಪೋಡಿ ಸಂಬಂಧ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ವಿಶೇಷ ಆಂದೋಲನದ ಕಾರ್ಯದಲ್ಲಿ ನಿರ್ಲಕ್ಷ್ಯವಹಿಸುವ ಸಿಬ್ಬಂದಿ ಮತ್ತು ಸರ್ವೆಯರ್‌ಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಆಂದೋಲನದ ಪ್ರಗತಿ ಪರಿಶೀಲನೆಗಾಗಿ ಮಂಗಳವಾರ ನಡೆದ ಸಭೆಯಲ್ಲಿ ಅವರು ತಹಶೀಲ್ದಾರ್‌ಗಳು, ಸರ್ವೆ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

ಒಂದು ಸರ್ವೆ ನಂಬರ್‌ನ ಎಲ್ಲ ಮಂಜೂರುದಾರರಿಗೆ ಏಕಕಾಲದಲ್ಲಿ ಜಮೀನಿನ ಅಳತೆ ಮಾಡಿ ಪೋಡಿ ಮಾಡುವ ಉದ್ದೇಶದಿಂದ ಕಂದಾಯ ಇಲಾಖೆಯಿಂದ ನಮೂನೆ 1-5 ರವರೆಗಿನ ಮಾಹಿತಿಯನ್ನು ತಯಾರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಸಾಫ್ಟ್‌ವೇರ್‌ ಸಿದ್ಧಪಡಿಸಲಾಗಿದ್ದು, ಎಲ್ಲಾ ದರಖಾಸ್ತು ಪೋಡಿ ಪ್ರಕರಣಗಳನ್ನು ಆನ್‍ಲೈನ್ ಮೂಲಕವೇ ನಿರ್ವಹಿಸಬೇಕಾಗಿದೆ ಎಂದರು.

ADVERTISEMENT

ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡು ಬಂದಿಲ್ಲ. ಈ ನಿಟ್ಟಿನಲ್ಲಿ ಆಯಾಯ ತಹಶೀಲ್ದಾರ್‌ಗಳು ಮತ್ತು ಸರ್ವೆ ಅಧಿಕಾರಿಗಳು ಮುತುವರ್ಜಿ ವಹಿಸಿ ಆದ್ಯತೆಯಲ್ಲಿ ಪ್ರಕರಣವನ್ನು ವಿಲೇವಾರಿ ಮಾಡಬೇಕು. ನಿರ್ಲಕ್ಷ್ಯ ವಹಿಸುವ ಸಿಬ್ಬಂದಿ ಮತ್ತು ಸರ್ವೆಯರ್‌ಗಳನ್ನು ಅಮಾನತುಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಎಲ್ಲ ತಹಶೀಲ್ದಾರ್ ಮತ್ತು ಸರ್ವೆ ಅಧಿಕಾರಿಗಳು ತಮ್ಮಲ್ಲಿರುವ ದರಖಾಸ್ತು ಪೋಡಿ ಪ್ರಕರಣಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಲು ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಜಮೀನು ಸರ್ವೆಗೆ ನಿರ್ಲಕ್ಷ್ಯ ತೋರುವ ಸರ್ವೆಯರ್‌ಗಳ ಪರವಾನಗಿ ರದ್ದುಗೊಳಿಸಲು ಶಿಫಾರಸು ಮಾಡಲಾಗುತ್ತದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಿ ಸಂತೋಷಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.