ಮಂಗಳೂರು: ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಭೂ ಸುಧಾರಣಾ ಕಾಯ್ದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಂಡು ರಾಜ್ಯದಲ್ಲೇ ಅಧಿಕ ಪ್ರಯೋಜನ ಪಡೆದ ಜಿಲ್ಲೆಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆನಂದ್ ಕೆ. ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪಂಚಾಯಿತಿಯ ನೇತ್ರವತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಡಿ. ದೇವರಾಜ ಅರಸು 109ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಬಿ.ಸಿ.ರೋಡ್ ಸರ್ಕಾರಿ ಪದವಿ ಪೂರ್ವ ಕಾಲೇಜು ಉಸನ್ಯಾಸಕ ಅಬ್ದುಲ್ ರಜಾಕ್ ಉಪನ್ಯಾಸ ನೀಡಿದರು.
ಎಸ್ಎಸ್ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ಹಿಂದುಳಿದ ಹಾಸ್ಟೆಲ್‌ಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಂಗಳೂರು ನಗಾರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಪಶು ಸಂಗೋಪನೆ ಉಪನಿರ್ದೇಶಕ ಅರುಣ್ ಶೆಟ್ಟಿ ಇದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.