ADVERTISEMENT

ಮಂಗಳೂರು ಗಾಂಜಾ ಪ್ರಕರಣ: ವೈದ್ಯ ವಿದ್ಯಾರ್ಥಿ ಸೇರಿ ಮತ್ತೆ ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 12 ಜನವರಿ 2023, 6:00 IST
Last Updated 12 ಜನವರಿ 2023, 6:00 IST
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು   

ಮಂಗಳೂರು: ಗಾಂಜಾ ಮಾರಾಟ ಹಾಗೂ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವೈದ್ಯ ವಿದ್ಯಾರ್ಥಿ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದಾರೆ.

ನಗರದ ವೈದ್ಯಕೀಯ ಕಾಲೇಜೊಂದರಲ್ಲಿ ಎಂಡಿ ಓದುತ್ತಿರುವ ತುಮಕೂರಿನ ಡಾ.ಹರ್ಷ ಕುಮಾರ್‌, ಡಿ ಫಾರ್ಮಾ ವಿದ್ಯಾರ್ಥಿಯಾಗಿರುವ ಕೇರಳದ ಕೊಚ್ಚಿಯ ಅಡಾನ್‌ ದೇವ್‌, ಮಂಗಳೂರು ಕಸಬ ಬೆಂಗ್ರೆಯ ಮಹಮ್ಮದ್‌ ಅಫ್ರಾರ್‌ ಬಂಧಿತರು.

ಮಹಮ್ಮದ್ ಅಫ್ರಾರ್‌ ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ನಗರದ ಬಂಟ್ಸ್ ಹಾಸ್ಟೆಲ್‌ ರಸ್ತೆ ಬಳಿಯ ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರ ಮನೆಯಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಮಾಹಿತಿ ಮೇರೆಗೆ ಜನವರಿ 7ರಂದು ದಾಳಿ ನಡೆಸಿದ್ದ ಪೊಲೀಸರು, ಬಿಡಿಎಸ್‌ ವಿದ್ಯಾರ್ಥಿ ನೀಲ್‌ಕಿಶೋರ್‌ ರಾಮ್‌ಜಿ ಷಾ ಎಂಬಾತನನ್ನು ಬಂಧಿಸಿ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು.

ಇಂಗ್ಲೆಂಡ್‌ ನಿವಾಸಿಯಾಗಿದ್ದ ಆತ ಅನಿವಾಸಿ ಭಾರತೀಯ ಕೋಟಾ ಅಡಿ 15 ವರ್ಷಗಳಿಂದ ನಗರದಲ್ಲಿ ವಾಸವಾಗಿರುವುದು ಹಾಗೂ ನಗರದ ಪ್ರತಿಷ್ಠಿತ ದಂತ ವೈದ್ಯ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಬಿಡಿಎಸ್‌ ವಿದ್ಯಾರ್ಥಿಯಾಗಿರುವುದು ಕಂಡು ಬಂದಿತ್ತು. ಆತ ನೀಡಿದ ಮಾಹಿತಿ ಆಧಾರದ ಮೇಲೆ ಇಬ್ಬರು ವೈದ್ಯರು, ಏಳು ಜನ ವೈದ್ಯಕೀಯ ವಿದ್ಯಾರ್ಥಿಗಳ ಸಹಿತ ಪೊಲೀಸರು 10 ಜನರನ್ನು ಬಂಧಿಸಿದ್ದರು. ಈಗ ಮತ್ತೆ ಮೂವರನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.