ಮಂಗಳೂರು: ಇಲ್ಲಿಯ ಬಿಜೈ ಪ್ರದೇಶದ ಮಸಾಜ್ ಪಾರ್ಲರ್ ಮೇಲೆ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಮಸಾಜ್ ಪಾರ್ಲರ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿತ್ತು ಎಂದು ಆರೋಪಿಸಿ ಅವರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ದಾಳಿ ನಡೆಸಿದವರು ರಾಮಸೇನೆ ಸಂಘಟನೆಯವರು ಎಂದು ಮೂಲಗಳು ತಿಳಿಸಿವೆ.
ದಾಳಿಗೂ ತಮ್ಮ ಸಂಘಟನೆಗೂ ಸಂಬಧ ಇಲ್ಲ ಎಂದು ಶ್ರೀರಾಮ ಸೇನೆಯ ಸ್ಥಳೀಯ ಪದಾಧಿಕಾರಿಗಳು ಹೇಳಿದ್ದಾರೆ.
ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಜಿ.ಪರಮೇಶ್ವರ, ಈ ದಾಳಿ ಏಕೆ ನಡೆದಿದೆ ಎಂಬ ಮಾಹಿತಿ ಇಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.