
ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಏರ್‌ಪೋರ್ಟ್ ಕೌನ್ಸಿಲ್ ಇಂಟರ್‌ನ್ಯಾಷನಲ್ (ಎಸಿಐ) ನೀಡುವ ಜಾಗತಿಕ ಮಟ್ಟದ ‘ವಿಮಾನ ನಿಲ್ದಾಣ ಸೇವಾ ಗುಣಮಟ್ಟ (ಆಗಮನ)–2025’ ಪ್ರಶಸ್ತಿಗೆ ಭಾಜನವಾಗಿದೆ.
ವಿಮಾನ ನಿಲ್ದಾಣದ ಸ್ವಚ್ಛತೆ, ಟರ್ಮಿನಲ್ ನಿರ್ವಹಣೆ, ಗ್ರಾಹಕರ ಸೇವೆಯಲ್ಲಿ ಉತ್ಕೃಷ್ಟತೆ ಈ ಎಲ್ಲ ಮಾನದಂಡಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಸೆಪ್ಟೆಂಬರ್ 2ರಂದು ಟರ್ಕಿಯ ಇಸ್ತಾನ್‌ಬುಲ್‌ನಲ್ಲಿ ನಡೆಯುವ ಎಸಿಐ ವಿಶ್ವ ವಿಮಾನ ನಿಲ್ದಾಣ ಅನುಭವ ಶೃಂಗಸಭೆಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ವರ್ಷ, ವಿಶ್ವದಾದ್ಯಂತ 100 ವಿಮಾನ ನಿಲ್ದಾಣಗಳನ್ನು ವಿಭಾಗಗಳಲ್ಲಿ ಗುರುತಿಸಲಾಗಿದೆ.
ಅದಾನಿ ಏರ್‌ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್‌ನ ಉಸ್ತುವಾರಿಯಲ್ಲಿರುವ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು 2024ರಲ್ಲಿಯೂ ವಿಮಾನ ನಿಲ್ದಾಣ ಸೇವಾ ಗುಣಮಟ್ಟ (ಎಸ್‌ಎಕ್ಯು) ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ವಿಮಾನಗಳ ಕಾರ್ಯಾಚರಣೆಯಲ್ಲಿ ದಕ್ಷತೆ, ಪ್ರಯಾಣಿಕ ಕೇಂದ್ರಿತ ಮೂಲ ಸೌಕರ್ಯ ಅಭಿವೃದ್ಧಿಗೆ ವಿಮಾನ ನಿಲ್ದಾಣವು ನೀಡಿರುವ ಆದ್ಯತೆಗೆ ದೊರೆತ ಗೌರವ ಇದಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.