
ಮಂಗಳೂರು ಕಂಬಳದಲ್ಲಿ ಉದ್ಯಮಿಗಳನ್ನು ಸನ್ಮಾನಿಸಲಾಯಿತು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.
ಮಂಗಳೂರು: ನಗರದ ಬಂಗ್ರ ಕೂಳೂರಿನ ಗೋಲ್ಡ್‌ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇತೃತ್ವದಲ್ಲಿ ನಡೆದ ಮಂಗಳೂರು ಕಂಬಳ ಭಾನುವಾರ ಸಂಪನ್ನವಾಗಿದ್ದು, ಒಟ್ಟು 141 ಜೊತೆ ಕೋಣಗಳು ಭಾಗವಹಿಸಿದವು.
ಕನೆಹಲಗೆ ವಿಭಾಗದಲ್ಲಿ 9 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 10 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 26 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 19 ಜೊತೆ ಹಾಗೂ ನೇಗಿಲು ಕಿರಿಯ ವಿಭಾಗದಲ್ಲಿ 60 ಜೊತೆಕೋಣಗಳು ಪಾಲ್ಗೊಂಡಿವೆ ಎಂದು ಆಯೋಜಕರು ತಿಳಿಸಿದ್ದಾರೆ.
ಕಂಬಳದ ಫಲಿತಾಂಶಗಳು ಇಂತಿವೆ: ಅಡ್ಡ ಹಲಗೆ: ಪ್ರಥಮ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ ‘ಎ’ (11.68 ಸೆ.); ಹಲಗೆ ಮುಟ್ಟಿದವರು–ತೆಕ್ಕಟ್ಟೆ ಸುಧೀರ್ ದೇವಾಡಿಗ; ದ್ವಿತೀಯ: ನಾರ್ಯ ಗುತ್ತು ಕುವೆತ್ತಬೈಲು ಸಂತೋಷ್ ರೈ ಬೊಳ್ಯಾರು; ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ. ಹಗ್ಗ ಹಿರಿಯ: ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.41 ಸೆ.)
ಓಡಿಸಿದವರು– ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ; ದ್ವಿತೀಯ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ಪ್ರಾಣೇಶ್ ದಿನೇಶ್ ಭಂಡಾರಿ ‘ಎ’; ಓಡಿಸಿದವರು– ಬೈಂದೂರು ವಿಶ್ವನಾಥ ದೇವಾಡಿಗ.
ಹಗ್ಗ ಕಿರಿಯ: ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ ‘ಬಿ‘ (11.41); ಓಡಿಸಿದವರು– ಮಂಗಲ್ಪಾಡಿ ರಕ್ಷಿತ್ ಶೆಟ್ಟಿ; ದ್ವಿತೀಯ: ಎರ್ಮಾಳು ಡಾ.ಚಿಂತನ್ ರೋಹಿತ್ ಹೆಗ್ಡೆ; ಓಡಿಸಿದವರು– ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ. ನೇಗಿಲು ಹಿರಿಯ: ಪ್ರಥಮ: 80 ಬಡಗಬೆಟ್ಟು ಕಲ್ಲಪಾಪು ಶ್ರೀಕಾ ಸಂದೀಪ್ ಶೆಟ್ಟಿ (10.87);
ಓಡಿಸಿದವರು– ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್; ದ್ವಿತೀಯ: ಮಂಗಳೂರು ಮರಕಡ ಬಾಯಾಡಿ ಮನೆ ಶಾಂತ ಸಂಜಯ್ ಶೆಟ್ಟಿ ‘ಎ’; ಓಡಿಸಿದವರು– ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ನೇಗಿಲು ಕಿರಿಯ: ಪ್ರಥಮ: ಎರ್ಮಾಳು ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಬಿ’ (11.56); ಓಡಿಸಿದವರು– ಕಾವೂರು ದೋಟ ಸುದರ್ಶನ್; ದ್ವಿತೀಯ:ಮೂಲ್ಕಿ ಚಿತ್ರಾಪು ಸಾನದಮನೆ ಅಂಬಿಕಾ ರವೀಂದ್ರ ಪೂಜಾರಿ; ಓಡಿಸಿದವರು– ಬಾರಾಡಿ ನತೀಶ್ ಸಫಲಿಗ.
10 ಉದ್ಯಮಿಗಳಿಗೆ ಸನ್ಮಾನ
ಇಜಿ ಕಂಪನಿಯ ಆನಂದ್ ಫರ್ನಾಂಡಿಸ್, ಎಸ್‌ಇಝೆಡ್‌ನಲ್ಲಿ ಸುಸ್ಥಿರ ಕಟ್ಟಡ ಸಾಮಗ್ರಿಗಳ ಘಟಕ ಸ್ಥಾಪಿಸಿದ ಎಂಐಆರ್ ಗ್ರೂಪ್‌ನ ಕಾರ್ಯ ನಿರ್ವಾಹಕ ನಿರ್ದೇಶಕ ನಿತಿನ್ ರತ್ನಾಕರ್, ಮಂಗಳೂರಿನ ಎಸ್‌ಇಝೆಡ್‌ನಲ್ಲಿ ಇಟ್ಯಾಗ್ ಎರ‍್ಜಿಟೆಕ್ನಿಕ್ ಪ್ರೈ. ಲಿ. ಉತ್ಪಾದನಾ ಘಟಕ ಸ್ಥಾಪಿಸಿದ ಬ್ರೂನೊ ಮರ‍್ಸೆಲ್ ಪ್ರಕಾಶ್ ಪೆರೇರಾ, ಶೆಫ್ ಹಾಗೂ ಉದ್ಯಮಿ ಶ್ರೀಯಾ ಶೆಟ್ಟಿ, ಅಗ್ರಿಲೀಫ್‌ನ ಅವಿನಾಶ್ ರಾವ್, ಇಂಡಸ್ಟ್ರಿಯಲ್ ಅಟೋಮೇಷನ್ ಆ್ಯಂಡ್ ಡಿಜಿಟಲ್ ಟೆಕ್ನಾಲಜೀಸ್‌ನ ಸ್ಮಿತಾ ರಾವ್, ಬೋಸ್ ಫ್ರೊಫೆಷನಲ್ಸ್‌ನ ಇಂಡಿಯಾ ಆರ್ ಆ್ಯಂಡ್ ಡಿ ಸೆಂಟರ್ ಸ್ಥಾಪಿಸಿರುವ ನಮಿತಾ ಪಿ.ಪಿ., ಡೀನೆಟ್ ರ‍್ವೀಸಸ್ ಪ್ರೈ.ಲಿ. ಸಂಸ್ಥೆಯ ಸಂದೇಶ್ ಡಿ. ಪೂಜಾರಿ, ಉದ್ಯಮಿ ಎಸ್‌ಎನ್ ಪೂಂಜಾ ಆ್ಯಂಡ್ ಕೋ ಮೂಲಕ ಕದ್ರಿ ಪರ‍್ಕ್ ಅಭಿವೃದ್ಧಿ ಸೇರಿ ವಿವಿಧ ವೆಂಚರ್‌ಗಳನ್ನು ಸ್ಥಾಪಿಸಿರುವ ಸುಧಾಕರ್ ಪೂಂಜಾ, ಇಂಡಿಪೆಂಡೆಂಟ್ ಇನ್ನೋವೇಷನ್ ಕಂಪನಿಯನ್ನು ಮಂಗಳೂರಿಗೆ ವಿಸ್ತರಿಸಿರುವ ಅನ್ಸಾರಿ ಅಲಿ ಅವರನ್ನು ಕಂಬಳ ವೇದಿಕೆಯಲ್ಲಿ ಗೌರವಿಸಲಾಯಿತು.
ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬ್ರಿಜೇಶ್ ಚೌಟ, ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಹರೀಶ್ ಪೂಂಜ, ಡಾ.ವೈ. ಭರತ್ ಶೆಟ್ಟಿ, ರಾಜೇಶ್ ನಾಯಕ್ ಉಳಿಪಾಡಿ, ಗುರುರಾಜ ಗಂಟಿಹೊಳೆ, ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕಿಶೋರ್ ಕುಮಾರ್ ಪ್ರಮುಖರಾದ ಪ್ರಮೋದ್ ಮಧ್ವರಾಜ್, ಬಿ. ನಾಗರಾಜ ಶೆಟ್ಟಿ, ಶಶಿಧರ ಶೆಟ್ಟಿ ಬರೋಡಾ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.