ADVERTISEMENT

Mangaluru Rains | ಗುಡ್ಡ ಕುಸಿದು ಮಗು ಸಾವು, ಮಣ್ಣಿನಡಿ ಸಿಲುಕಿರುವ ಕುಟುಂಬ

​ಪ್ರಜಾವಾಣಿ ವಾರ್ತೆ
Published 30 ಮೇ 2025, 3:09 IST
Last Updated 30 ಮೇ 2025, 3:09 IST
<div class="paragraphs"><p>ಕಾನಕರೆಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ಮಗು ಸಾವು</p></div>

ಕಾನಕರೆಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ಮಗು ಸಾವು

   

ಉಳ್ಳಾಲ: ತಾಲ್ಲೂಕಿನ ಬೆಳ್ಳಗ್ರಾಮದ ಕಾನಕರೆ ಎಂಬಲ್ಲಿ ವಿಪರೀತ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ಮಗು ಮೃತಪಟ್ಟಿದೆ.

ಮೃತ ಮಗುವನ್ನು ನೌಶಾದ್‌ರ ಪುತ್ರಿ ನಯೀಮ ಎಂದು ಗುರುತಿಸಲಾಗಿದೆ.

ADVERTISEMENT

ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.

ಮೊಂಟೆಪದವುನಲ್ಲಿ ಗುಡ್ಡ ಜರಿದು ಮೂವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಇದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತ ಗೊಂಡಿದೆ. ಕುಂಪಲ, ಕಲ್ಲಾಪು, ಧರ್ಮ ನಗರ, ಉಚ್ಚಿಲ, ತಲಪಾಡಿ, ವಿದ್ಯಾನಗರ, ಕಲ್ಕಟ್ಟ ಮುಂತಾದ ಕಡೆ ಗಳಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದು ಮನೆಯೊಳಗೆ ನೀರು ನುಗ್ಗಿದೆ. ಬಹಳಷ್ಟು ಕುಟುಂಬಗಳು ರಾತ್ರಿ ವೇಳೆ ಬೇರೆಡೆ ಸ್ಥಳಾಂತರ ಗೊಂಡಿದೆ.

ಕಲ್ಲಾಪುವಿನಲ್ಲಿ 50 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ . ತಲಪಾಡಿಯಲ್ಲಿ ಒಂದು ಮನೆಗೆ ನೀರು ನುಗ್ಗಿ ಹಾನಿಯಾಗಿದೆ. ಈ ಕುಟುಂಬವನ್ನು ರಾತ್ರಿ ವೇಳೆ ಸ್ಥಳಾಂತರ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್, ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ, ಗ್ರಾಮಕರಣಿಕ ಸುರೇಶ್‌ ಮತ್ತಿತರರು ರಾತ್ರಿ ವೇಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಉಳ್ಳಾಲ ಕಲ್ಲಾಪು ಪರಿಸರದಲ್ಲಿ ಮನೆಗಳಿಗೆ ನೀರು ನುಗ್ಗಿದೆ

ಉಳ್ಳಾಲ ಕಲ್ಲಾಪು ಪರಿಸರದಲ್ಲಿ ಮನೆಗಳಿಗೆ ನೀರು ನುಗ್ಗಿದೆ

ಉಳ್ಳಾಲ ಕಲ್ಲಾಪು ಪರಿಸರದಲ್ಲಿ ಮನೆಗಳಿಗೆ ನೀರು ನುಗ್ಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.