ಬಂಧನ
(ಪ್ರಾತಿನಿಧಿಕ ಚಿತ್ರ)
ಮಂಗಳೂರು: ಮತೀಯ ಗೂಂಡಾಗಿರಿ ನಡೆಸಿದ ಆರೋಪದ ಮೇಲೆ ಆರು ಮಂದಿಯನ್ನು ನಗರದ ಪಾಂಡೇಶ್ವರದ ದಕ್ಷಿಣ ಠಾಣೆಯ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಗಣೇಶ, ಶ್ರೇಯಸ್, ಚಿಂಟು, ಚಂದನ್, ನಾಗರಾಜ್ ಹಾಗೂ ರಾಮಚಂದ್ರ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
‘ಬೇರೆ ಬೇರೆ ಧರ್ಮಕ್ಕೆ ಸೇರಿದ ಯುವಕ ಹಾಗೂ ವಿದ್ಯಾರ್ಥಿನಿ ಸೋಮವಾರ (ಆ 11) ಸಂಜೆ ಒಟ್ಟಿಗೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಗಳು ತಡೆದು ನಿಲ್ಲಿಸಿದ್ದು, ವಿದ್ಯಾರ್ಥಿನಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ವಿದ್ಯಾರ್ಥಿನಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.
‘ನಗರದ ಪದವಿ ಪೂರ್ವ ಕಾಲೇಜೊಂದರ ವಿದ್ಯಾರ್ಥಿನಿಯು ತರಗತಿಗಳು ಮುಗಿದ ಬಳಿಕ ಸರ್ವಿಸ್ ಬಸ್ ನಿಲ್ದಾಣಕ್ಕೆ ತನ್ನ ಗೆಳೆಯನ ಜೊತೆ ತೆರಳಿದ್ದಳು. ಆಕೆಯ ಗೆಳೆಯ ಮಧ್ಯಾಹ್ನ 3.30ರ ಸುಮಾರಿಗೆ ಬಸ್‌ನಲ್ಲಿ ಮನೆಗೆ ಹೋಗಿದ್ದ. ಆ ಗೆಳೆಯನ ಬಂಧುವೊಬ್ಬರ ಜೊತೆಗೆ ವಿದ್ಯಾರ್ಥಿನಿ ಮಾತನಾಡುತ್ತಾ ಒಟ್ಟಿಗೆ ನಡೆದುಕೊಂಡು ಹೋಗುತ್ತಿರುವಾಗ ಏಳೆಂಟು ಮಂದಿಯ ಗುಂಪು ಅವರನ್ನು ತಡೆದು ಜಗಳವಾಡಿತ್ತು‘ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.