ADVERTISEMENT

ಮಹಮ್ಮದ್ ಫಾಝಿಲ್ ಹತ್ಯೆ ಆರೋಪಿಗಳು ಪೊಲೀಸ್ ಕಸ್ಟಡಿಗೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2022, 16:28 IST
Last Updated 3 ಆಗಸ್ಟ್ 2022, 16:28 IST
ಮಹಮ್ಮದ್ ಫಾಝಿಲ್
ಮಹಮ್ಮದ್ ಫಾಝಿಲ್    

ಮಂಗಳೂರು: ಸುರತ್ಕಲ್‌ನ ಮಹಮ್ಮದ್ ಫಾಝಿಲ್ ಹತ್ಯೆ ಆರೋಪದ ಮೇಲೆ ಬಂಧಿತರಾಗಿರುವ ಆರು ಆರೋಪಿಗಳಿಗೆ ಮಂಗಳೂರು ನ್ಯಾಯಾಲಯವು 14 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

ಜುಲೈ 27ರ ರಾತ್ರಿ ಕಾರಿನಲ್ಲಿ ಬಂದ ತಂಡ ಫಾಝಿಲ್‌ ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಪರಾರಿಯಾಗಿತ್ತು. ಈ ಘಟನೆ ಸಂಬಂಧ ಪೊಲೀಸರು ಸುಹಾಸ್ ಶೆಟ್ಟಿ, ಮೋಹನ್ ಸಿಂಗ್, ಗಿರಿಧರ್, ಅಭಿಷೇಕ್, ಶ್ರೀನಿವಾಸ್ ಹಾಗೂ ದೀಕ್ಷಿತ್ ಸೇರಿ ಒಟ್ಟು ಆರು ಜನರನ್ನು ಬಂಧಿಸಿದ್ದರು.

ಆರೋಪಿಗಳಿಗೆ ಕಾರನ್ನು ಬಾಡಿಗೆ ನೀಡಿದ ಆರೋಪದ ಮೇಲೆ ಬಂಧಿತನಾಗಿದ್ದ ಅಜಿತ್ ಕ್ರಾಸ್ತಾನನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.

ADVERTISEMENT

ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಘಟನೆ ನಡೆದ ಪ್ರದೇಶಕ್ಕೆ ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಲಾಯಿತು.

ಪೊಲೀಸ್ ಕಸ್ಟಡಿ ನಾಲ್ಕು ದಿನ ವಿಸ್ತರಣೆ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಆರೋಪಿ ಶಫೀಕ್‌ (27)ನನ್ನು ಮತ್ತೆ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪ್ರಕರಣದ ಆರೋಪಿಗಳಾದ ಶಫೀಕ್ ಮತ್ತು ಝಾಕೀರ್ ಎಂಬಿಬ್ಬರನ್ನು ಜುಲೈ 28ರಂದು ಬಂಧಿಸಲಾಗಿತ್ತು. ಪ್ರವೀಣ್ ಕೊಲೆ ಪ್ರಕರಣದ ಸಂಬಂಧ ಈವರೆಗೆ ನಾಲ್ವರನ್ನು ಬಂಧಿಸಲಾಗಿದೆ. ಸುಳ್ಯ ತಾಲ್ಲೂಕಿನ ಬೆಳ್ಳಾರೆಯಪ್ರವೀಣ್ ನೆಟ್ಟಾರು ಅವರನ್ನು ಜುಲೈ 26ರಂದು ಹತ್ಯೆ ಮಾಡಲಾಗಿತ್ತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.