ಅಪಘಾತದಿಂದ ನಜ್ಜುಗುಜ್ಜಾಗಿರುವ ಆಟೊರಿಕ್ಷಾ
ಮಂಗಳೂರು: ಪಣಂಬೂರಿನಲ್ಲಿ ರಾಷ್ಡ್ರೀಯ ಹೆದ್ದಾರಿ 66ರ ಸಿಗ್ನಲ್ ಬಳಿ ನಿಂತಿದ್ದ ಆಟೊ ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಪಣಂಬೂರು ಬಳಿ ರಾಷ್ಟ್ರೀಯ ಹೆದ್ದಾರಿ ಸಿಗ್ನಲ್ ನಲ್ಲಿ ವಾಹನಗಳು ಸಾಲಾಗಿ ನಿಂತಿದ್ದವು. ಒಂದು ಟ್ಯಾಂಕರ್ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಹೊಡೆದಿತ್ತು.
ಪರಿಣಾಮ ರಿಕ್ಷಾ ಸಮೀಪದಲ್ಲಿ ನಿಂತಿದ್ದ ಮುಂದೆ ನಿಂತಿದ್ದ ಟ್ಯಾಂಕರ್ ಗೆ ಅಪ್ಪಳಿಸಿದೆ. ಎರಡು ಟ್ಯಾಂಕರ್‌ಗಳ ನಡುವೆ ಸಿಲುಕಿ ಆಟೊ ರಿಕ್ಷಾ ಅಪ್ಪಚ್ಚಿಯಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತದೇಹಗಳನ್ನು ನಗರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಮೃತರ ವಿವರ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.