ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲ್ಲೂಕಿನ ಕೋಟೇಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ. ರೋಡ್ ಶಾಖೆಯಲ್ಲಿ ನಡೆದಿದ್ದ ₹14 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಪ್ರಕರಣದಲ್ಲಿ ಭಾಗಿಯಾದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮೂವರು ಆರೋಪಿಗಳನ್ನು ಬಂಧಿಸಿರುವುದನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ದೃಢ ಪಡಿಸಿದ್ದಾರೆ.
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಗೆ ಶುಕ್ರವಾರ ನುಗ್ಗಿದ್ದ ದರೋಡೆಕೋರರು ₹11 ಲಕ್ಷ ನಗದು ಹಾಗೂ ಚಿನ್ನಾಭರಣ ದೋಚಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.