ADVERTISEMENT

ಮಂಗಳೂರು | ₹14 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದರೋಡೆ ‍ಪ್ರಕರಣ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 20 ಜನವರಿ 2025, 13:18 IST
Last Updated 20 ಜನವರಿ 2025, 13:18 IST
<div class="paragraphs"><p>ಕೋಟೇಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ. ರೋಡ್‌ ಶಾಖೆ</p></div>

ಕೋಟೇಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ. ರೋಡ್‌ ಶಾಖೆ

   

ಮಂಗಳೂರು: ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ. ರೋಡ್‌ ಶಾಖೆಯಲ್ಲಿ ನಡೆದಿದ್ದ ₹14 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಮೂವರು ಆರೋಪಿಗಳನ್ನು ಬಂಧಿಸಿರುವುದನ್ನು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗ್ರವಾಲ್‌ ದೃಢ ಪಡಿಸಿದ್ದು, ಬಂಧಿತರ ಮಾಹಿತಿಯನ್ನು ಇನ್ನಷ್ಟೇ ನೀಡಬೇಕಿದೆ.

ADVERTISEMENT

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್‌ ಶಾಖೆಗೆ ಶುಕ್ರವಾರ ನುಗ್ಗಿದ್ದ ದರೋಡೆಕೋರರು ₹11 ಲಕ್ಷ ನಗದು ಹಾಗೂ ಅಂದಾಜು ₹14 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.