ADVERTISEMENT

ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಯುವವಾಹಿನಿ ಸಂಸ್ಥೆಯಿಂದ ಆರ್ಥಿಕ ನೆರವು

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 12:56 IST
Last Updated 5 ಆಗಸ್ಟ್ 2022, 12:56 IST
ದುಷ್ಕರ್ಮಿಗಳ ದಾಳಿಯಿಂದ ಹತ್ಯೆಯಾದ ಬಿಜೆಪಿ ಯುವಮೋರ್ಚದ ಮುಖಂಡ ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಯುವವಾಹಿನಿ ಕೇಂದ್ರ ಸಮಿತಿಯಿಂದ ಗುರುವಾರ ₹ 1 ಲಕ್ಷ ಆರ್ಥಿಕ ನೆರವು ನೀಡಲಾಯಿತು.
ದುಷ್ಕರ್ಮಿಗಳ ದಾಳಿಯಿಂದ ಹತ್ಯೆಯಾದ ಬಿಜೆಪಿ ಯುವಮೋರ್ಚದ ಮುಖಂಡ ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಯುವವಾಹಿನಿ ಕೇಂದ್ರ ಸಮಿತಿಯಿಂದ ಗುರುವಾರ ₹ 1 ಲಕ್ಷ ಆರ್ಥಿಕ ನೆರವು ನೀಡಲಾಯಿತು.   

ಸುಳ್ಯ: ದುಷ್ಕರ್ಮಿಗಳ ದಾಳಿಯಿಂದ ಹತ್ಯೆಯಾದ ಬಿಜೆಪಿ ಯುವಮೋರ್ಚದ ಮುಖಂಡ ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಯುವವಾಹಿನಿ ಕೇಂದ್ರ ಸಮಿತಿಯಿಂದ ಗುರುವಾರ ₹ 1 ಲಕ್ಷ ಆರ್ಥಿಕ ನೆರವು ನೀಡಲಾಯಿತು.

ಪ್ರವೀಣ್‌ ನೆಟ್ಟಾರು ಅವರು ಸುಳ್ಯ ಯುವವಾಹಿನಿ ಘಟಕದ ಮಾಜಿ ಅಧ್ಯಕ್ಷರಾಗಿದ್ದು ಹಾಗೂ ಪ್ರಸ್ತುತ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅವರ ಸೇವಾ ಮನೋಭಾವ ಸ್ಮರಣೀಯವಾದುದು ಎಂದು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಉದಯ ಅಮೀನ್‌ಮಟ್ಟು ಸ್ಮರಿಸಿದರು.

ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಮತ್ತು ಸದಸ್ಯರುಪ್ರವೀಣ್‌ಮನೆಗೆತೆರಳಿ ಅವರ ಪತ್ನಿ ನೂತನಾ ಹಾಗೂ ತಂದೆ– ತಾಯಿಗೆ ಸಾಂತ್ವನ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.