ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕು ಬೆಳಂದೂರು ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 48 ಸೆಂಟಿ ಮೀಟರ್ ಮಳೆಯಾಗಿದೆ.
ಬೆಳ್ತಂಗಡಿಯಲ್ಲಿ 37, ಸುಳ್ಯ ತಾಲ್ಲೂಕು ಬೆಳ್ಳಾರೆಯಲ್ಲಿ 28, ಪುತ್ತೂರಿನ ರಾಮಕುಂಜ 27, ಬಂಟ್ವಾಳದ ಕವಲಮುದುರು 24, ಬೆಳ್ತಂಗಡಿಯ ಪಟ್ರಮೆಯಲ್ಲಿ 24 ಸೆಂಟಿ ಮೀಟರ್ ಮಳೆ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ 35 ಮಳೆ ಮಾಪನ ಕೇಂದ್ರಗಳಲ್ಲಿ 10 ಸೆಂಟಿ ಮೀಟರ್‌ಗೂ ಹೆಚ್ಚು ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.