ADVERTISEMENT

ದಕ್ಷಿಣ ಕನ್ನಡ: ಕೋವಿಡ್ ನಿಯಂತ್ರಣಕ್ಕೆ ನಾಳೆಯಿಂದ ಬಿಗಿ ನಿಯಮಗಳ ಜಾರಿ

ಮೇ 15 ರ ನಂತರ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ಇಲ್ಲ, ನಿತ್ಯ ಬೆಳಿಗ್ಗೆ 6ರಿಂದ 9 ರವರೆಗೆ ಮಾತ್ರ ಖರೀದಿ

​ಪ್ರಜಾವಾಣಿ ವಾರ್ತೆ
Published 6 ಮೇ 2021, 13:09 IST
Last Updated 6 ಮೇ 2021, 13:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ಶುಕ್ರವಾರದಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ನಿರ್ಧರಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಗುರುವಾರ ತುರ್ತು ಸಭೆ ನಡೆದಿದ್ದು, ಬೆಳಿಗ್ಗೆ 6 ರಿಂದ 9ರ ತನಕ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. 10 ಗಂಟೆಯ ಒಳಗಡೆ ವ್ಯಾಪಾರಸ್ಥರು ಹಾಗೂ ಜನರು ಮನೆ ಸೇರಬೇಕು ಎಂದು ಸಚಿವರು ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಮೇ 15ರ ಬಳಿಕ ಯಾವ ಕಾರ್ಯಕ್ರಮಗಳಿಗೂ ಅವಕಾಶವಿಲ್ಲ. ಮದುವೆ, ಗೃಹಪ್ರವೇಶ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ. ಮೇ 15ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳನ್ನು ರದ್ದುಪಡಿಸಬೇಕು. ಕಾರ್ಯಕ್ರಮ ಆಯೋಜಿಸಿದವರ ಮನವೊಲಿಸಿ ಅದನ್ನು ಮುಂದೂಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.