ADVERTISEMENT

ಮಂಗಳೂರು: ಬ್ಯಾಸ್ಕೆಟ್‌ಬಾಲ್ ಟೂರ್ನಿ 25ರಿಂದ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2022, 5:18 IST
Last Updated 12 ಆಗಸ್ಟ್ 2022, 5:18 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬ್ಯಾಸ್ಕೆಟ್‌ಬಾಲ್ ಸಂಸ್ಥೆಯ ಆಶ್ರಯದಲ್ಲಿ ಮಂಗಳೂರು ಬ್ಯಾಸ್ಕೆಟ್‌ಬಾಲ್ ಕ್ಲಬ್ ಆಯೋಜಿಸಿರುವ ಜೇಮ್ಸ್ ನೈಸ್ಮಿತ್ ಕಪ್ ಬ್ಯಾಸ್ಕೆಟ್‌ಬಾಲ್ ಟೂರ್ನಿ ಇದೇ 25ರಿಂದ 28ರ ವರೆಗೆ ನಡೆಯಲಿದೆ.

ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಪ್ರಾಥಮಿಕ ಶಾಲೆ, ಹೈಸ್ಕೂಲ್‌ ವಿದ್ಯಾರ್ಥಿ–ವಿದ್ಯಾರ್ಥಿನಿಯರು, ಅಂತರ ಕಾಲೇಜು ಪುರುಷ–ಮಹಿಳಾ ವಿಭಾಗದವರ ಸ್ಪರ್ಧೆಗಳು ಇರುತ್ತವೆ.

ನೋಂದಣಿಗೆ ಇದೇ 20 ಕೊನೆಯ ದಿನವಾಗಿದ್ದು ಮಾಹಿತಿಗೆಕೋಚ್‌ ಆದಿತ್ಯ ಮಹಾಲೆ (9964837261) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.