ADVERTISEMENT

ಮಂಗಳೂರು: ಸರ್ಕಾರಿ ಶಾಲೆಯಲ್ಲಿ ವನಮಹೋತ್ಸವ

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 14:11 IST
Last Updated 1 ಜುಲೈ 2025, 14:11 IST
ವಿವಿಧ ಸಂಘಟನೆಗಳ ಆಶ್ರಯದಲ್ಲಿ ಮಂಗಳೂರಿನ ಗಾಂಧಿನಗರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ನಡೆಯಿತು
ವಿವಿಧ ಸಂಘಟನೆಗಳ ಆಶ್ರಯದಲ್ಲಿ ಮಂಗಳೂರಿನ ಗಾಂಧಿನಗರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ನಡೆಯಿತು   

ಮಂಗಳೂರು: ಗೋಕರ್ಣನಾಥೇಶ್ವರ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕ, ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಹಾಗೂ ಗೋಕರ್ಣನಾಥೇಶ್ವರ ಸ್ನಾತಕೋತ್ತರ ವಿಭಾಗದ ಪ್ರಕೃತಿ ಘಟಕದ ಸಹಯೋಗದಲ್ಲಿ ಗಾಂಧಿನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕ ಜಯರಾಜ್ ಎನ್ ಮಾತನಾಡಿ, ಸಮಾಜದ ಪ್ರತಿಯೊಬ್ಬರಲ್ಲೂ ಪ್ರಕೃತಿಯ ಬಗ್ಗೆ ಜಾಗೃತಿ ಮೂಡಬೇಕಾಗಿದೆ. ನಮ್ಮ ಬದುಕು ಸುರಕ್ಷಿತವಾಗಿರಲು ಪ್ರಕೃತಿ ರಕ್ಷಣೆ ಮುಖ್ಯ ಎಂಬ ಅರಿವು ಮೂಡಬೇಕಾಗಿದೆ ಎಂದರು.

ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಯ ಸಂಚಾಲಕ ವಸಂತ ಕಾರಂದೂರು, ಆಡಳಿತಾಧಿಕಾರಿ ನಾಗೇಶ್ ಕರ್ಕೇರ, ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಶರ್ಮಿಳಾ ಡಿಸೋಜ, ರಾಜೇಶ್ವರಿ ಪ್ರಭು, ಪದವಿ ಕಾಲೇಜಿನ ಪ್ರಾಂಶುಪಾಲ ಜಯರಾಜ್, ಪ.ಪೂ.ಕಾಲೇಜಿನ ಪ್ರಾಂಶುಪಾಲ ರಘುರಾಜ್ ಕದ್ರಿ, ಎನ್.ಎಸ್.ಎಸ್ ಸಂಯೋಜನಾಧಿಕಾರಿ ಭಾರತಿ, ಅಮಿತ್ ಎನ್, ಅಶ್ವಿನಿ, ಪ್ರವೀಣ್, ಮಹೇಶ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.