ಮುಡಿಪು: ಮಂಜನಾಡಿ ಗ್ರಾಮದ ಖಂಡಿಗ ಎಂಬಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಶನಿವಾರ ತಡರಾತ್ರಿ ಘಟನೆ ನಡೆದಿದೆ. ಗಾಯಾಳುಗಳನ್ನು ದೇರಳಕಟ್ಟೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಖಂಡಿಕ ನಿವಾಸಿ ಮುತ್ತಲಿಬ್ ಎಂಬುವರ ಮನೆಯಲ್ಲಿ ಘಟನೆ ಸಂಭವಿಸಿದೆ. ತಾಯಿ ಖುಬ್ರಾ ಹಾಗೂ ಮಕ್ಕಳಾದ ಮೆಅದಿಯಾ, ಮಝಿಯಾ, ಮಾಯಿದಾ ಅವರ ದೇಹ ಸುಟ್ಟು ಗಂಭೀರ ಗಾಯವಾಗಿದೆ. ಸ್ಥಳೀಯರು ಬೆಂಕಿ ನಂದಿಸಿದರು.
ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಚಾವಣಿ ಹಾರಿ ಹೋಗಿದೆ. ತಾಯಿ ಮತ್ತು ಮಕ್ಕಳು ಒಂದೇ ಕೊಠಡಿಯಲ್ಲಿ ಮಲಗಿದ್ದರು. ಅವರು ಮಲಗಿದ್ದ ಮಂಚ ಸುಟ್ಟು ಕರಕಲಾಗಿದೆ. ಅನಿಲ ಸೋರಿಕೆಯಿಂದ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ತಹಶೀಲ್ದಾರ್ ಪುಟ್ಟರಾಜು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.