ಮೂಡುಬಿದಿರೆ: ಬುಧವಾರ ರಾತ್ರಿ ಸುರಿದ ರಭಸದ ಗಾಳಿ ಮಳೆಗೆ ಹಲವು ಮನೆಗಳಿಗೆ ಹಾನಿಯಾಗಿದ್ದು ವಾಲ್ಪಾಡಿಯಲ್ಲಿ ಮಹಿಳೆಯೊಬ್ಬರ ಮೇಲೆ ಮನೆಯ ಶೀಟು ಬಿದ್ದು ಗಾಯಗೊಂಡಿದ್ದಾರೆ. ಗುಲಾಬಿ ಗಾಯಗೊಂಡವರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಲ್ಪಾಡಿಯಲ್ಲಿ ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಕೋಟೆಬಾಗಿಲಿನಲ್ಲಿ ಆಯಿಷಾ ಅವರ ಮನೆಯ ಶೀಟ್ ಗಾಳಿಗೆ ಹಾರಿ ಸ್ವಲ್ಪ ದೂರ ಹೋಗಿ ಬಿದ್ದಿದೆ. ಹೊಸಬೆಟ್ಟುನಲ್ಲಿ ಭವಾನಿ ಎಂಬುವರ ಮನೆ ಮೇಲೆ ಮರ ಬಿದ್ದು ಹಂಚು ಒಡೆದಿದೆ. ಕೆಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.