ADVERTISEMENT

ಮಂಗಳೂರು: ಕೊರಗಜ್ಜ ಆದಿಕ್ಷೇತ್ರಕ್ಕೆ‌‌ ಭಕ್ತರ ನಡಿಗೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 3:59 IST
Last Updated 19 ಮಾರ್ಚ್ 2023, 3:59 IST
   

ಮಂಗಳೂರು: ಹಿಂದೂ ಸಮಾಜದ ಐಕ್ಯತೆಗೆ ಮತ್ತು ಲೋಕ ಕಲ್ಯಾಣಾರ್ಥ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಸಾವಿರಾರು ಮಂದಿ ನಗರದ ಕದ್ರಿ ಮಂಜುನಾಥ ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜನ ಆದಿಕ್ಷೇತ್ರಕ್ಕೆ ಭಾನುವಾರ ಮುಂಜಾನೆ ನಡಿಗೆಯಲ್ಲಿ ಸಾಗಿದರು.

"ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ" ಎಂಬ ಹೆಸರಿನಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಕದ್ರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅರ್ಚಕರು ಚಾಲನೆ‌ ನೀಡಿದರು. ಹನುಮಾನ್ ಚಾಲೀಸ ಪಠಿಸಿದ ಭಕ್ತರು ಬಳಿಕ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಆ ಬಳಿಕ ನಡಿಗೆಯಲ್ಲಿ ಸಾಗಿದರು.

ಕುತ್ತಾರಿನ ಕೊರಗಜ್ಜನ ಆದಿಕ್ಷೇತ್ರವನ್ನು ತಲುಪಿದ ಬಳಿಕ ಭಕ್ತರು ಅಲ್ಲೂ ಸಾಮೂಹಿಕ ಪ್ರಾರ್ಥನೆ ನಡೆಸಲಿದ್ದಾರೆ. ಅಲ್ಲಿ ಧಾರ್ಮಿಕ ಸಭೆ ನಡೆಯಲಿದೆ.

ADVERTISEMENT

ವರ್ಷದಲ್ಲಿ ಒಂದು ದಿನ ಕೊರಗಜ್ಜನ ಆದಿಕ್ಷೇತ್ರಕ್ಕೆ ಪಾದಯಾತ್ರೆ ಕಾರ್ಯಕ್ರಮವನ್ನು ವಿಶ್ವಹಿಂದೂ ಪರಿಷತ್ ಎರಡು ವರ್ಷಗಳಿಂದ ಹಮ್ಮಿಕೊಳ್ಳುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.