ADVERTISEMENT

‘ಶತ್ರು ರಾಷ್ಟ್ರ ಪಾಕಿಸ್ತಾನ ನಾಮಾವಶೇಷವಾಗಲಿ’: ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 9 ಮೇ 2025, 16:07 IST
Last Updated 9 ಮೇ 2025, 16:07 IST
ಉಪ್ಪಿನಂಗಡಿ ಸಮೀಪದ ಗಂಡಿಬಾಗಿಲು ಮಸೀದಿಯಲ್ಲಿ ಭಾರತೀಯ ಸೈನಿಕರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು
ಉಪ್ಪಿನಂಗಡಿ ಸಮೀಪದ ಗಂಡಿಬಾಗಿಲು ಮಸೀದಿಯಲ್ಲಿ ಭಾರತೀಯ ಸೈನಿಕರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು   

ಉಪ್ಪಿನಂಗಡಿ: ಶತ್ರು ರಾಷ್ಟ್ರ ಪಾಕಿಸ್ತಾನದ ವಿರುದ್ಧ ಜೀವದ ಹಂಗು ತೊರೆದು ಹೋರಾಡುವ ನಮ್ಮ ಸೈನಿಕರಿಗೆ ನೈತಿಕ ಬೆಂಬಲ ನೀಡಬೇಕಾದುದುದು ಭಾರತೀಯರಾಗಿರುವ ನಮ್ಮೆಲರ ಹೊಣೆಯಾಗಿದೆ. ಭಾರತೀಯ ಸೈನಿಕರಿಗೆ ಭಗವಂತನು ಮತ್ತಷ್ಟು ಶಕ್ತಿ ಅನುಗ್ರಹಿಸಲಿ, ಶತ್ರು ರಾಷ್ಟ್ರ ಪಾಕಿಸ್ತಾನ ನಾಮಾವಶೇಷವಾಗಲಿ ಎಂಬ ಸಂಕಲ್ಪದೊಂದಿಗೆ ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಮಸೀದಿಯಲ್ಲಿ ಶುಕ್ರವಾರದ ನಮಾಜಿನ ಬಳಿಕ ಮಸೀದಿ ಖತೀಬ್ ಅಬ್ದುಲ್ ರಜಾಕ್ ಸುಲ್ತಾನ್ ದಾರಿಮಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಸೀದಿ ಅಧ್ಯಕ್ಷ ಎಸ್.ಅಬ್ದುಲ್ ರಹಿಮಾನ್, ಉಪಾಧ್ಯಕ್ಷ ಜಿ.ಮಹಮ್ಮದ್ ರಫೀಕ್, ಕಾರ್ಯದರ್ಶಿ ನಝೀರ್ ಪೂರಿಂಗ, ಖಜಾಂಚಿ ಹಸೈನಾರ್, ಎಸ್.ಕೆ.ಎಸ್.ಎಸ್.ಎಫ್. ಅಧ್ಯಕ್ಷ ಇಸಾಕ್ ಬೊಳುಂಬುಡ ಭಾಗವಹಿಸಿದ್ದರು.

ಮೇ 10ರಂದು ಬೆಂಗಳೂರು ಮೂಲಕ ಹಜ್ ಯಾತ್ರೆ ಕೈಗೊಂಡಿರುವ ಜಮಾಅತ್ ಸದಸ್ಯ ಪಿ.ಅಬ್ಬಾಸ್ ಅವರನ್ನು ಎಸ್.ಕೆ.ಎಸ್.ಎಸ್.ಎಫ್. ವತಿಯಿಂದ ಸನ್ಮಾನಿಸಲಾಯಿತು. ಪದಾಧಿಕಾರಿಗಳಾದ ಝಿಯಾದ್ ಸ್ವಾಗತಿಸಿ, ಯಂಗ್‌ಮೆನ್ಸ್‌ ಅಧ್ಯಕ್ಷ ಪಿ. ಲತೀಫ್ ವಂದಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.