ಮಂಗಳೂರು: ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಮಹಾನಗರ ಪಾಲಿಕೆ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ನಗರ ವ್ಯಾಪ್ತಿಯಲ್ಲಿ ಬೀದಿ ಬದಿ ತಿಂಡಿ, ತಿನಿಸುಗಳ ವ್ಯಾಪಾರವನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದೆ.
ಶನಿವಾರದಿಂದಲೇ ಬೀದಿ ಬದಿ ತಿಂಡಿ, ತಿನಿಸುಗಳ ವ್ಯಾಪಾರ ಸ್ಥಗಿತಗೊಳಿಸಬೇಕು. ತಪ್ಪಿದಲ್ಲಿ ಸೋಮವಾರದಿಂದ ಪಾಲಿಕೆಯಿಂದ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಪಾಲಿಕೆ ಆಯುಕ್ತ ಎಸ್. ಅಜಿತ್‌ಕುಮಾರ್ ಹೆಗ್ಡೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.