ADVERTISEMENT

ಕಾಲುವೆ ಒತ್ತುವರಿ: ತನಿಖೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 26 ಜೂನ್ 2025, 13:41 IST
Last Updated 26 ಜೂನ್ 2025, 13:41 IST
ಮಹಾನಗರ ಪಾಲಿಕೆ ಮಾಜಿ ಸದಸ್ಯರು ಐವನ್ ಡಿಸೋಜ ನೇತೃತ್ವದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರಿಗೆ ಮನವಿ ಸಲ್ಲಿಸಿದರು
ಮಹಾನಗರ ಪಾಲಿಕೆ ಮಾಜಿ ಸದಸ್ಯರು ಐವನ್ ಡಿಸೋಜ ನೇತೃತ್ವದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರಿಗೆ ಮನವಿ ಸಲ್ಲಿಸಿದರು   

ಮಂಗಳೂರು: ಮುಖ್ಯ ಕಾಲುವೆ ಒತ್ತುವರಿ, ಪ್ರಮುಖ ಕಾಲುವೆಯ ಕಳಪೆ ಕಾಮಗಾರಿ ಬಗ್ಗೆ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರನ್ನು ಒತ್ತಾಯಿಸಿದರು.

ಕಾಂಗ್ರೆಸ್‌ನ ಮಾಜಿ ಕಾರ್ಪೊರೇಟರ್‌ಗಳು ಐವನ್ ಡಿಸೋಜ ನೇತೃತ್ವದಲ್ಲಿ ಬುಧವಾರ ಜಿಲ್ಲಾಧಿಕಾರಿ ಭೇಟಿ ಮಾಡಿ, ಈ ಕುರಿತು ಚರ್ಚಿಸಿದರು.

ಪಾಲಿಕೆಯಲ್ಲಿ ಸಮಗ್ರವಾಗಿ ಬದಲಾವಣೆ ತರುವಂತಹ ಆಡಳಿತ ವ್ಯವಸ್ಥೆ ತರಬೇಕು ಮತ್ತು ಮಹಾನಗರ ಪಾಲಿಕೆಯಲ್ಲಿ ನಡೆಯುವ ಭ್ರಷ್ಟಾಚಾರದ ವಿರುದ್ದ ತನಿಖೆ ನಡೆಸಬೇಕು. ಕಾನೂನು ಬಾಹಿರವಾಗಿ ನಡೆಯುವ ಅನೇಕ ವಿಷಯಗಳ ಬಗ್ಗೆ ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದರು.

ADVERTISEMENT

ಮಳೆಹಾನಿಯಿಂದ ಆಗಿರುವ ನಷ್ಟಕ್ಕೆ ಶೀಘ್ರ ‍ಪರಿಹಾರ ಒದಗಿಸಬೇಕು ಎಂದು ಐವನ್ ಒತ್ತಾಯಿಸಿದರು. ಪಂಪ್‌ವೆಲ್‌ ಮತ್ತು ಇತರ ಕಡೆಗಳಲ್ಲಿ ಮಳೆ ಬಂದಾಗ ಉಂಟಾಗುವ ನೆರೆ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ನಿಟ್ಟಿನಲ್ಲಿ ವರದಿ ಸಿದ್ಧಪಡಿಸಬೇಕು ಎಂದು ಒತ್ತಾಯಿಸಲಾಯಿತು.

ಮಾಜಿ ಕಾರ್ಪೊರೇಟರ್‌ಗಳಾದ ಶಶಿಧರ್‌ ಹೆಗ್ದೆ, ಪ್ರವೀಣ್‌ಚಂದ್ರ ಆಳ್ವ, ಪ್ರಕಾಶ್ ಸಾಲಿಯಾನ್‌, ಶಂಶುದ್ದೀನ್‌ ಕುದ್ರೋಳಿ, ಲ್ಯಾನ್ಸ್‌ ಲೋಟ್‌ ಪಿಂಟೊ, ಅಶ್ರಫ್‌ ಬಜಾಲ್‌, ಸತೀಶ್‌ ಪೆಂಗಲ್‌, ಕಿಶೋರ್‌ ಶೆಟ್ಟಿ, ಹೇಮಂತ್‌ ಗರೋಡಿ, ಪ್ರೇಮ್‌ ಬಲ್ಲಾಳ್‌ಬಾಗ್‌  ಜೊತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.