ADVERTISEMENT

ಖರ್ಗೆ ನಿಂದನೆ: ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 31 ಜನವರಿ 2025, 5:07 IST
Last Updated 31 ಜನವರಿ 2025, 5:07 IST
ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಅವರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರಿಗೆ ದೂರು ಸಲ್ಲಿಸಿದರು
ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಅವರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರಿಗೆ ದೂರು ಸಲ್ಲಿಸಿದರು   

ಮಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿ, ವಾಟ್ಸ್‌ಆ್ಯಪ್‌ನಲ್ಲಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇತೃತ್ವ ನಿಯೋಗವು ಗುರುವಾರ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರಿಗೆ ದೂರು ಸಲ್ಲಿಸಿತು.

ನಗರದ ಶಕ್ತಿನಗರ ಕೊಡಿಕಂಬ ನಿವಾಸಿಯೊಬ್ಬ ವಾಟ್ಸ್‌ಆ್ಯಪ್ ಗ್ರೂಪ್‌ವೊಂದರಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿ ಪೋಸ್ಟ್ ಮಾಡಿದ್ದು, ಪರಿಶಿಷ್ಟ ಸಮುದಾಯಕ್ಕೆ ತೀರಾ ನೋವುಂಟಾಗಿದೆ. ಈತನ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ನಿಯೋಗದಲ್ಲಿ ಕಾಂಗ್ರೆಸ್ ಪ್ರಮುಖರಾದ ಪದ್ಮರಾಜ್.ಆರ್, ದಿನೇಶ್ ಮೂಳೂರು, ಕೆ.ಅಪ್ಪಿ, ಟಿ.ಹೊನ್ನಯ್ಯ, ದುರ್ಗಾ ಪ್ರಸಾದ್, ಕವಿತಾ ವಾಸು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.