ADVERTISEMENT

ಬೆಂಗಳೂರಲ್ಲಿ ‘ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ‘ ಸ್ಮಾರಕ ಸ್ಥಾಪನೆ: ಸಿಎಂ

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆ ಅನಾವರಣ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2022, 6:57 IST
Last Updated 19 ನವೆಂಬರ್ 2022, 6:57 IST
 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಮಂಗಳೂರು: ಕೆದಂಬಾಡಿ ರಾಮಯ್ಯ ಗೌಡರು ಸೇರಿದಂತೆ ಕನ್ನಡ ನಾಡಿನಲ್ಲಿ ಆಗಿಹೋಗಿರುವ ಸಾಕಷ್ಟು ಜನ ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸವನ್ನು ಸ್ಮರಿಸಲು ಮತ್ತು ಯುವ ಪೀಳಿಗೆಗೆ ಪರಿಚಯಿಸಲು ಬೆಂಗಳೂರಿನಲ್ಲಿ ‘ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ’ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿಯ ಬಾವುಟಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಶನಿವಾರ ಅನಾವರಣಗೊಳಿಸಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

‘ಕೆದಂಬಾಡಿ ರಾಮಯ್ಯಗೌಡರು ಸಂಘಟನಾ ಚತುರರಾಗಿದ್ದರು. ರೈತ ಹೋರಾಟಗಾರರ ಪಡೆಯನ್ನು ಕಟ್ಟಿಕೊಂಡು ಬ್ರಿಟಿಷರ ವಿರುದ್ಧ ಸಮರ ಸಾರಿದ್ದರು. ಅವರ ಪ್ರತಿಮೆ ಅನಾವರಣದ ವೇಳೆ ನನಗೆ ಇಂತಹ ಮಹಾನ್‌ ಸೇನಾನಿಗಳನ್ನು ಸ್ಮರಿಸಲು ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಸ್ಥಾಪಿಸುವ ಪ್ರೇರಣೆ ದೊರೆತಿದೆ’ ಎಂದರು.

ADVERTISEMENT

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸಚಿವರಾದ ಎಸ್. ಅಂಗಾರ, ಡಾ.ಅಶ್ವತ್ಥನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ. ಸದಾನಂದಗೌಡ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಯು.ಟಿ. ಖಾದರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.