ಮಂಗಳೂರು: ಕತಾರ್ ನಲ್ಲಿರುವ ಅಮೆರಿಕದ ಸೇನಾ ನೆಲೆ ಮೇಲೆ ಇರಾನ್ ದಾಳಿ ನಡೆಸಿದ ಬೆನ್ನಲ್ಲೇ ಮಧ್ಯಪ್ರಾಚ್ಯ ರಾಷ್ಟ್ರಗಳು ತಮ್ಮ ವ್ಯಾಪ್ತಿಯ ವಾಯುಮಾರ್ಗ ಬಳಕೆ ಮೇಲೆ ನಿರ್ಬಂಧ ಹೇರಿದ್ದು, ಇಲ್ಲಿನ ಬಜಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಪ್ರಾಚ್ಯ ರಾಷ್ಟ್ರಗಳ ವಿಮಾನಯಾನ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
ಸೋಮವಾರ ಸಂಜೆ ಇಲ್ಲಿಂದ ದಮಾಮ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಮಸ್ಕತ್ ತೆರಳುವಂತೆ ಸೂಚಿಸಲಾಗಿತ್ತು. ಅಬುಧಾಬಿಯಲ್ಲಿ ಇಳಿಯ ಬೇಕಿದ್ದ ಇಂಡಿಗೊ ವಿಮಾನವನ್ನು ಮುಂಬೈನಲ್ಲಿ ಇಳಿಸಲಾಗಿತ್ತು. ಈ ಎರಡೂ ವಿಮಾನಗಳು ಮಂಗಳವಾರ ಬಜಪೆ ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಮರಳಿವೆ.
ಮಧ್ಯಪ್ರಾಚ್ಯ ರಾಷ್ಟ್ರಗಳ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಆಗಿರುವುದರಿಂದ ವಿಮಾನ ಪ್ರಯಾಣಿಕರು ತಾವು ಪ್ರಯಾಣಿಸಬೇಕಾದ ವಿಮಾನದ ಸೇವೆಯ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿಕೊಳ್ಳುವಂತೆ ಮಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.