
ಪ್ರಜಾವಾಣಿ ವಾರ್ತೆ
ಸಹಾಯವಾಣಿ ಸಾಂದರ್ಭಿಕ ಚಿತ್ರ
ಮಂಗಳೂರು: ಮಧ್ಯ ಪ್ರಾಚ್ಯ ಹಾಗೂ ಗಲ್ಫ್ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಕಾರಣಕ್ಕೆ ವಿಮಾನಯಾನ ಸೇವೆಯಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಈ ದೇಶಗಳಲ್ಲಿ ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿ ಇದೆ. ದಕ್ಷಿಣ ಕನ್ನಡ ಜಿಲ್ಲೆಯವರು ಕೂಡ ಇದ್ದರೆ, ಈ ದೇಶಗಳಲ್ಲಿರುವ ಸಹಾಯವಾಣಿಗೆ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ (24x7) ಕೇಂದ್ರದ ದೂರವಾಣಿ ಸಂಖ್ಯೆ : 0824-2442590, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.