ADVERTISEMENT

ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ: ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2022, 16:24 IST
Last Updated 27 ಆಗಸ್ಟ್ 2022, 16:24 IST
ವಿ.ಸೋಮಣ್ಣ
ವಿ.ಸೋಮಣ್ಣ   

ಬೆಳ್ತಂಗಡಿ (ದಕ್ಷಿಣ ಕನ್ನಡ): ‘ಧರ್ಮಸ್ಥಳ ಭಾಗದಲ್ಲಿ ನಾಲ್ಕು ಹೆಲಿಕಾಪ್ಟರ್‌ಗಳು ಏಕಕಾಲದಲ್ಲಿ ಲ್ಯಾಂಡಿಂಗ್ ಆಗಲು ಅವಕಾಶವಿರುವಂತೆ ಮಿನಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು’ ಎಂದು ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಬೆಳ್ತಂಗಡಿಯಲ್ಲಿ ಶನಿವಾರ ವಸತಿ ಯೋಜನೆಯ 1,640 ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿಯ ಆದೇಶ ಪತ್ರವನ್ನು ವಿತರಿಸಿ ಅವರು ಮಾತನಾಡಿದರು.

‘ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕೋರಿಕೆಯಂತೆ ಪ್ರಸ್ತಾವಿತ ಯೋಜನೆಯನ್ನು ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ 100 ಎಕರೆ ಜಮೀನಿದ ಅಗತ್ಯವಿದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳ ಜತೆ ವಾರದೊಳಗೆ ಚರ್ಚಿಸಿ, ₹100 ಕೋಟಿಯ ಡಿಪಿಆರ್‌ ಸಿದ್ಧಪಡಿಸಿ ಸಚಿವ ಸಂಪುಟದ ಮುಂದೆ ಕೊಂಡೊಯ್ಯಲಾಗುವುದು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.