ADVERTISEMENT

ಕಾಜೂರು ದರ್ಗಾಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 7:16 IST
Last Updated 27 ಜನವರಿ 2026, 7:16 IST
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಕಾಜೂರು ದರ್ಗಾಕ್ಕೆ ಭೇಟಿ ನೀಡಿದರು
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಕಾಜೂರು ದರ್ಗಾಕ್ಕೆ ಭೇಟಿ ನೀಡಿದರು   

ಉಜಿರೆ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಕಾಜೂರು ದರ್ಗಾ ಉರುಸ್‌ಗೆ ಭೇಟಿ ನೀಡಿ ಮುಖಂಡರೊಂದಿಗೆ ಮಾತುಕತೆ ನಡೆಸಿದರು.

ಸರ್ವಧರ್ಮೀಯರೂ ಬರುವ ಪವಿತ್ರ ಕ್ಷೇತ್ರ ಕಾಜೂರಿನಲ್ಲಿ ಯಾತ್ರಿನಿವಾಸ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ನೀಡಲು ಪ್ರಯತ್ನಿಸುವುದಾಗಿ ಸಚಿವರು ಭರವಸೆ ನೀಡಿದರು.

ದರ್ಗಾಸಮಿತಿಯಿಂದ ಸಚಿವರನ್ನು ಗೌರವಿಸಲಾಯಿತು. ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕೆ.ಕೆ.ಸಾಹುಲ್ ಹಮೀದ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಆರ್.ತಿಮ್ಮಯ್ಯ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಾತ್, ಕಾಜೂರು ದರ್ಗಾಸಮಿತಿ ಅಧ್ಯಕ್ಷ ಕೆ.ಯು.ಇಬ್ರಾಹಿಂ ಭಾಗವಹಿಸಿದ್ದರು.

ADVERTISEMENT

ಅಡುಗೆ, ಸಾಂಸ್ಕೃತಿಕ ಸ್ಪರ್ಧೆ

ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ವಿಶ್ವನಾಥ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿದರು

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ಆಶ್ರಯದಲ್ಲಿ ತಾಲ್ಲೂಕಿನ ಏಳು ಪ್ರೌಢಶಾಲೆಗಳಲ್ಲಿರುವ ಇಂಟರಾಕ್ಟ್‌ ಕ್ಲಬ್‌ಗಳ ಸದಸ್ಯರಿಗೆ ಭಾನುವಾರ ಅಡುಗೆ ಸ್ಪರ್ಧೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉಜಿರೆಯಲ್ಲಿ ಆಯೋಜಿಸಲಾಯಿತು.

ಸ್ಪರ್ಧೆ ಉದ್ಘಾಟಿಸಿದ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ವಿಶ್ವನಾಥ ಮಾತನಾಡಿ, ವಿದ್ಯಾರ್ಥಿಗಳು ಸೃಜನಾತ್ಮಕವಾಗಿ ಚಿಂತನ-ಮಂಥನ ನಡೆಸಿ ರಚನಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬೆಳ್ತಂಗಡಿ ರೋಟರಿಕ್ಲಬ್ ಅಧ್ಯಕ್ಷ ಪ್ರೊ.ಪಿ.ಪ್ರಕಾಶ ಪ್ರಭು, ಡಾ.ಶಶಿಕಾಂತ ಡೋಂಗ್ರೆ ಮಾತನಾಡಿದರು.

ಫಲಿತಾಂಶ: ಅಡುಗೆಸ್ಪರ್ಧೆ: ಹರ್ಷಿತ್, ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ (ಪ್ರಥಮ), ಶಫಾ, ಎಸ್‌ಡಿಎಂ ಸೆಕೆಂಡರಿ ಶಾಲೆ, ಉಜಿರೆ (ದ್ವಿತೀಯ).

ಸಾಂಸ್ಕೃತಿಕ ಸ್ಪರ್ಧೆಗಳು: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್‌ಸಿ) ಉಜಿರೆ ಪ್ರಥಮ, ಎಸ್‌ಡಿಎಂ ಸೆಕೆಂಡರಿ ಶಾಲೆ ಉಜಿರೆ ಮತ್ತು ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ದ್ವಿತೀಯ), ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ (ತೃತೀಯ).

ಗೀತಾಪ್ರಕಾಶ ಪ್ರಭು, ಡಾ.ಅನಿತಾದಯಾಕರ, ಪವಿತ್ರ ಸಂದೇಶ ರಾವ್ ತೀರ್ಪುಗಾರರಾಗಿ ಸಹಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.