ADVERTISEMENT

ಮಂಗಳೂರು: ನೆರೆಪೀಡಿತ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2024, 6:00 IST
Last Updated 2 ಆಗಸ್ಟ್ 2024, 6:00 IST
   

ಮಂಗಳೂರು: ನಿರಂತರ ಮಳೆಯಿಂದ ಜಲಾವೃತಗೊಂಡಿರುವ ಅದ್ಯಪಾಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರವ್ ಭೇಟಿ‌ ನೀಡಿದರು.

ಫಾಲ್ಗುಣಿ ನದಿಗೆ ಪ್ರವಾಹ ಬಂದಾಗ ಅದ್ಯಪಾಡಿಯ ಹಲವಾರು ಮನೆಗಳ ಜನರು ಸಂಕಷ್ಟಕ್ಕೆ ಸಿಲುಕುತ್ತಾರೆ. ಇದು ಪ್ರತಿ ವರ್ಷದ ಗೋಳು. ಗದ್ದೆಗಳು ಮುಳುಗಡೆಯಾಗುತ್ತವೆ ಎಂದು ಸ್ಥಳೀಯರಾದ ಶಿವರಾಮ್ ಹೇಳಿದರು.

ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದರು.

ADVERTISEMENT

ಅದ್ಯಪಾಡಿಯ ಅಕ್ಕ ಪಕ್ಕದ ಹಳ್ಳಿಗಳಲ್ಲಿ ಪ್ರವಾಹ ತಡೆಯಲು, ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರ ವರದಿ ಪಡೆದು ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.

ನೆರೆ ಪರಿಹಾರ ಪಡೆಯಲು ಅದ್ಯಪಾಡಿ ನಿವಾಸಿಗಳು ನಿರಾಕರಿಸಿದರು.

ಭತ್ತದ ಗದ್ದೆ ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಿ. ಅದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹಾರ ಪಡೆಯಿರಿ. ನೆರೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಒದಗಿಸುವ ಜವಾಬ್ದಾರಿ ನಾವು ನೋಡಿಕೊಳ್ಳುತ್ತೇವೆ ಎಂದು ಸಚಿವರು ರೈತರಲ್ಲಿ ಮನವಿ ಮಾಡಿದರು.

ಸಚಿವರ ಮನವಿಗೆ ರೈತರು ಒಪ್ಪಿದರು.

ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ 11 ವರ್ಷಗಳಿಂದ ಗ್ರಾಮಸ್ಥರು ನೆರೆ ಪರಿಹಾರ ತಿರಸ್ಕರಿಸುತ್ತ ಬಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.