ADVERTISEMENT

ಧರ್ಮಸ್ಥಳ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ: ಸಚಿವ ಈಶ್ವರ ಖಂಡ್ರೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2024, 14:02 IST
Last Updated 5 ಫೆಬ್ರುವರಿ 2024, 14:02 IST
ಧರ್ಮಸ್ಥಳದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಧರ್ಮಾಧಿಕಾರಿಗಳನ್ನು ಸನ್ಮಾನಿಸಲಾಯಿತು
ಧರ್ಮಸ್ಥಳದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಧರ್ಮಾಧಿಕಾರಿಗಳನ್ನು ಸನ್ಮಾನಿಸಲಾಯಿತು   

ಉಜಿರೆ: ಧರ್ಮಸ್ಥಳವನ್ನು ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಎಂದು ಅರಣ್ಯ ಮತ್ತು ಪರಿರಸ ಖಾತೆ ಸಚಿವ ಈಶ್ವರ ಖಂಡ್ರೆ ಸೋಮವಾರ ಘೋಷಿಸಿದರು. ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು ಪ್ಲಾಸ್ಟಿಕ್‌ ತ್ಯಾಜ್ಯ ಜನರ ಆರೋಗ್ಯ ಹಾಗೂ ಪರಿಸರಕ್ಕೆ ಹಾನಿಯುಂಟು ಮಾಡುತ್ತಿದ್ದು ಅದನ್ನು ನಿಷೇಧಿಸುವ ಮೂಲಕ ಈ ಗ್ರಾಮ ರಾಜ್ಯಕ್ಕೆ ಮಾದರಿಯಾಗಬೇಕು. ಆ ಮೂಲಕ ಕರ್ನಾಟಕ ಪ್ಲಾಸ್ಟಿಕ್ ಬಳಕೆಮುಕ್ತ ರಾಜ್ಯವಾಗಬೇಕು ಎಂದರು.

ಪ್ಲಾಸ್ಟಿಕ್ ಮಾರಾಟ, ಖರೀದಿ ಮತ್ತು ಬಳಕೆ ಸಂಪೂರ್ಣ ನಿಲ್ಲಬೇಕು. ಯಾತ್ರಿಕರು ನೇತ್ರಾವತಿ ನದಿಯಲ್ಲಿ ತ್ಯಾಜ್ಯ ಎಸೆಯಬಾರದು ಎಂದು ಅವರು ಸೂಚಿಸಿದರು.

ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ಮೂಲನೆಗಾಗಿ ಒಂದು ವಾರದೊಳಗೆ 2 ಯಂತ್ರಗಳನ್ನು ಖರೀದಿಸಲಾಗುವುದು. ಪ್ಲಾಸ್ಟಿಕ್‌ ತ್ಯಾಜ್ಯವನ್ನು ರಸ್ತೆ ದುರಸ್ತಿಗೆ ಬಳಸಲಾಗುವುದು ಎಂದರು.

ADVERTISEMENT

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ, ಮಂಗಳೂರು ವೃತ್ತ ಸಿಎಫ್‌ಒ ವಿ.ಕರಿಜಳನ್, ಕೆಎಸ್‌ಡಿಸಿ ಕಮಲಾ ಕರಿಕಾಳನ್, ಡಿಎಫ್‌ಒ ಅಂಥೋನಿ, ಎಸ್. ಮರಿಯಪ್ಪ, ಎಸಿಎಫ್ ಶ್ರೀಧರ್, ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್, ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ ರಾವ್ ಇದ್ದರು.

ಧರ್ಮಸ್ಥಳದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಧರ್ಮಾಧಿಕಾರಿ ಮಾತನಾಡಿದರು
ಧರ್ಮಸ್ಥಳವನ್ನು ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಎಂದು ಸಚಿವ ಈಶ್ವರ ಖಂಡ್ರೆ ಸೋಮವಾರ ಘೋಷಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.