ADVERTISEMENT

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಾಧಿಕಾರ ಬಗ್ಗೆ ಶೀಘ್ರ ತೀರ್ಮಾನ: ಸಚಿವ ಕೋಟ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 14:46 IST
Last Updated 17 ಆಗಸ್ಟ್ 2020, 14:46 IST
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ   

ಸುಬ್ರಹ್ಮಣ್ಯ: ‘ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿ ಬದಲು, ಪ್ರಾಧಿಕಾರ ರಚಿಸುವ ಬಗ್ಗೆ ಶೀಘ್ರವೇ ತೀರ್ಮಾನಿಸಲಾಗುವುದು’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಇಲ್ಲಿಗೆ ಸಮೀಪದ ಬಳ್ಪ ಗ್ರಾಮದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಪ್ರಾಧಿಕಾರ ರಚಿಸುವಂತೆ ಬೇಡಿಕೆಗಳು ಬಂದಿದ್ದು, ಪರಿಶೀಲಿಸಲಾಗುತ್ತಿದೆ’ ಎಂದರು.

‘ರಾಜ್ಯದ 80ಕ್ಕೂ ಅಧಿಕ ‘ಎ’ ದರ್ಜೆ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಯ ಪ್ರಕ್ರಿಯೆಯು ಅಂತಿಮ ಹಂತದಲ್ಲಿದ್ದು, ವಾರದಲ್ಲಿ ಅಧಿಕೃತ ಪ್ರಕಟಣೆ ಹೊರಬೀಳಲಿದೆ’ ಎಂದರು.

ADVERTISEMENT

‘ದೇವಸ್ಥಾನಗಳಲ್ಲಿ ಸೇವೆಗಳನ್ನು ಆರಂಭಿಸುವ ಬಗ್ಗೆ ಆರೋಗ್ಯ ಇಲಾಖೆ ಜೊತೆ ಚರ್ಚಿಸಲಾಗುವುದು. ಈ ಬಾರಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ. ಆದರೆ, ದೇವಸ್ಥಾನಗಳಲ್ಲಿ ಆಚರಿಸುವ ಬಗ್ಗೆ ಚರ್ಚಿಸಿ, ತಿಳಿಸಲಾಗುವುದು’ ಎಂದು ಪ್ರಶ್ನೆಗಳಿಗೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.