ADVERTISEMENT

ಗೋಶಾಲೆಗಳಿಗೆ ಸಮಸ್ಯೆ ಆಗದಂತೆ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಗೋಶಾಲೆಗಳಿಗೆ ಭೇಟಿ ನೀಡಿದ ಸಚಿವ ಕೋಟ

​ಪ್ರಜಾವಾಣಿ ವಾರ್ತೆ
Published 1 ಮೇ 2020, 16:06 IST
Last Updated 1 ಮೇ 2020, 16:06 IST
ಪಜೀರು ಗೋವನಿತಾಶ್ರಯ ಟ್ರಸ್ಟ್‌ನ ಗೋಶಾಲೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಭೇಟಿ ನೀಡಿದರು.
ಪಜೀರು ಗೋವನಿತಾಶ್ರಯ ಟ್ರಸ್ಟ್‌ನ ಗೋಶಾಲೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಭೇಟಿ ನೀಡಿದರು.   

ಮಂಗಳೂರು: ರಾಜ್ಯದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಗೋಶಾಲೆಗಳಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಂಟ್ವಾಳ ತಾಲ್ಲೂಕಿನ ಪಜೀರು ಗ್ರಾಮದ ಗೋವನಿತಾಶ್ರಯ ಟ್ರಸ್ಟ್‌ನ ಗೋಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಗೋಶಾಲೆಗಳಿಗೆ ಹುಲ್ಲು ಸೇರಿದಂತೆ ಅಗತ್ಯ ಆಹಾರ ಸಾಮಗ್ರಿಗಳ ಕೊರತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಚಿಕ್ಕಮಗಳೂರು, ಹಾಸನ ಸೇರಿದಂತೆ ಹೊರ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಹುಲ್ಲು ತರಿಸಲು ವಾಹನಗಳಿಗೆ ಪಾಸ್ ನೀಡುವುದು ಸೇರಿದಂತೆ ಪಶುಸಂಗೋಪನಾ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಗೋಸೇವಾ ಆಯೋಗದ ಮಾಜಿ ಅಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಚಂದ್ರಹಾಸ ಪೂಂಜಾ, ರಾಜೇಶ್ ಶೆಟ್ಟಿ, ವಾಮನರಾಜ, ರವಿರಾಜ್, ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.