ವೀಣಾ ಜಾರ್ಜ್
ಕಾಸರಗೋಡು: ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯೇ ರಾಜ್ಯದ ಆರ್ಥಿಕ ಮುಗ್ಗಟ್ಟಿಗೆ ಕಾರಣ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಆರೋಪಿಸಿದರು.
ಕಾಸರಗೋಡು ಸರ್ಕಾರಿ ಜನರಲ್ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಮಲತಾಯಿ ಧೋರಣೆಯಿಂದ ಕತ್ತು ಹಿಸುಕುತ್ತಿರುವ ಕೇಂದ್ರ ಸರ್ಕಾರದ ಯತ್ನದ ನಡುವೆಯೂ ರಾಜ್ಯ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಕೇರಳ ಸರ್ಕಾರವನ್ನು ಎಲ್ಲ ವಲಯಗಳಲ್ಲೂ ವಿಫಲಗೊಳಿಸಲು ವ್ಯವಸ್ಥಿತ ಸಂಚು ನಡೆಸಲಾಗುತ್ತಿದೆ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.