ಕಾಸರಗೋಡು: ಜಿಲ್ಲೆಗೆ ಗುರುವಾರ ಭೇಟಿ ನೀಡಿದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಇಲ್ಲಿನ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಆರೋಗ್ಯ ಇಲಾಖೆಯ ‘ಆರದ್ರಂ ಆರೋಗ್ಯಂ’ ಕಾರ್ಯಕ್ರಮದ ಅಂಗವಾಗಿ ಭೇಟಿ ನೀಡಿದ ಅವರು, ಮಂಗಲ್ಪಾಡಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ, ಕಾಸರಗೋಡು ಸರ್ಕಾರಿ ಜನರಲ್ ಆಸ್ಪತ್ರೆ, ಬೇಡಡ್ಕ ತಾಲ್ಲೂಕು ಆಸ್ಪತ್ರೆ, ವೆಳ್ಳರಿಕುಂಡ್ ತಾಲ್ಲೂಕು ಸರ್ಕಾರಿ ಆಸ್ಪತ್ರೆ, ಕಾಞಂಗಾಡು ಜಿಲ್ಲಾ ಆಸ್ಪತ್ರೆ, ನೀಲೇಶ್ವರ ತಾಲ್ಲೂಕು ಆಸ್ಪತ್ರೆ, ತ್ರಿಕರಿಪುರ ತಾಲ್ಲೂಕು ಆಸ್ಪತ್ರೆಗಳನ್ನು ಪರಿಶೀಲಿಸಿದರು.
ಈ ವೇಳೆ ಆಸ್ಪತ್ರೆಗಳ ಚಟುವಟಿಕೆ ಸಂಬಂಧ ಸಿಬ್ಬಂದಿ, ರೋಗಿಗಳು ಮತ್ತು ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಿದರು. ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.