
ಪ್ರಜಾವಾಣಿ ವಾರ್ತೆ
ಪೊಲೀಸ್
ಸಾಂದರ್ಭಿಕ ಚಿತ್ರ
ಕಾಸರಗೋಡು: 5 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಧೂರು ಬಳಿಯ ಮಾಯಿಪ್ಪಾಡಿ ನಿವಾಸಿ ಅಬ್ದುಲ್ ಸಲಾಂ (41) ಎಂಬುವವರನ್ನು ನಗರ ಪೊಲೀಸರು ರಾಜಸ್ತಾನದಲ್ಲಿ ಪತ್ತೆಮಾಡಿದ್ದಾರೆ.
ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅಬ್ದುಲ್ ಸಲಾಂ ಅವರು 5 ವರ್ಷಗಳ ಹಿಂದೆ ಕಾಣೆಯಾಗಿದ್ದು, ಹೇಗೋ ರಾಜಸ್ಥಾನ ಸೇರಿದ್ದರು. ರಾಜಸ್ತಾನದ ಅಪ್ನಾಘರ್ ಎಂಬ ಅನಾಥಾಲಯಕ್ಕೆ ಸೇರ್ಪಡೆಗೊಂಡಿದ್ದ ಈತ ನೀಡಿದ್ದ ಮಾಹಿತಿ ಹಿನ್ನೆಲೆಯಲ್ಲಿ ಸಂಸ್ಥೆಯ ಮಂದಿ ನೌಕಾಪಡೆಯ ಸಿಬ್ಬಂದಿಯೊಬ್ಬರ ಸಹಾಯದಿಂದ ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ವಿ.ವಿಜಯ್ ರೆಡ್ಡಿ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದರು. ಅವರ ಆದೇಶ ಪ್ರಕಾರ ನಗರ ಪೊಲೀಸರು ಅಲ್ಲಿಗೆ ತೆರಳಿ ಕರೆತಂದು ಮನೆಮಂದಿಗೆ ಒಪ್ಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.