ADVERTISEMENT

ಎಂಐಟಿಇ ಮೂಡಬಿದಿರೆ: ಹರ್ ಘರ್ ತಿರಂಗಾ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2022, 3:00 IST
Last Updated 13 ಆಗಸ್ಟ್ 2022, 3:00 IST
ಮೂಡುಬಿದಿರೆಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್‌ ಎಂಜಿನಿಯರಿಂಗ್‌ನಲ್ಲಿ (ಮೈಟ್) ಗುರುವಾರ ಆಯೋಜಿಸಿದ್ದ ‘ಹರ್ ಘರ್ ತಿರಂಗಾ’ ಕಾರ್ಯಕ್ರಮದಲ್ಲಿ ಸಿಬ್ಬಂದಿಗೆಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಅವರು ಧ್ವಜ ವಿತರಿಸಿದರು.
ಮೂಡುಬಿದಿರೆಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್‌ ಎಂಜಿನಿಯರಿಂಗ್‌ನಲ್ಲಿ (ಮೈಟ್) ಗುರುವಾರ ಆಯೋಜಿಸಿದ್ದ ‘ಹರ್ ಘರ್ ತಿರಂಗಾ’ ಕಾರ್ಯಕ್ರಮದಲ್ಲಿ ಸಿಬ್ಬಂದಿಗೆಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಅವರು ಧ್ವಜ ವಿತರಿಸಿದರು.   

ಮಂಗಳೂರು: ‘ರಾಷ್ಟ್ರೀಯತೆಯ ಹೆಮ್ಮೆಯನ್ನು ಹುಟ್ಟುಹಾಕಿ, ಬದಲಾವಣೆಯ ವೇಗವರ್ಧಕವಾಗಿ ಕೆಲಸ ಮಾಡಿ ಮತ್ತು ಭಾರತೀಯರು ಎಂದು ಹೇಳಿಕೊಳ್ಳಲು ಹೆಮ್ಮೆಪಡಿ’ ಎಂದು ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೂಡುಬಿದಿರೆಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್‌ ಎಂಜಿನಿಯರಿಂಗ್‌ನಲ್ಲಿ (ಮೈಟ್) ಗುರುವಾರ ಆಯೋಜಿಸಿದ್ದ ‘ಹರ್ ಘರ್ ತಿರಂಗಾ’ ಕಾರ್ಯಕ್ರಮದಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಧ್ವಜ ವಿತರಿಸಿ ಅವರು ಮಾತನಾಡಿದರು.

ಮೈಟ್ ಅಧ್ಯಕ್ಷ ರಾಜೇಶ್ ಚೌಟ ಅಧ್ಯಕ್ಷತೆ ವಹಿಸಿದ್ದರು. ಕ್ಯಾಂಪಸ್‍ನಲ್ಲಿ 2,500 ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಧ್ವಜಗಳನ್ನು ವಿತರಿಸಲಾಯಿತು. ನಂತರ ಸಂಸ್ಥೆಯ ಜಯದೇವ ಪ್ರಸಾದ್ ನೇತೃತ್ವದಲ್ಲಿ ಸಮೀಪದ ಗ್ರಾಮಗಳಿಗೆ ಭೇಟಿ ನೀಡಿ 2,500ಕ್ಕೂ ಹೆಚ್ಚು ಮನೆಗಳಿಗೆ ಧ್ವಜಗಳನ್ನು ವಿತರಿಸಲಾಯಿತು.

ADVERTISEMENT

ಪ್ರಾಂಶುಪಾಲ ಡಾ.ಎಂ.ಎಸ್. ಗಣೇಶ ಪ್ರಸಾದ್ ಸ್ವಾಗತಿಸಿದರು. ಎಂಬಿಎ ಅಧ್ಯಾಪಕ ಅಮೃತರಾಜ್ ವಂದಿಸಿದರು. ದೀಪ್ತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.