ADVERTISEMENT

ಕುಲ್ಕುಂದ: ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ, ವಿಚಾರಗೋಷ್ಠಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 2:30 IST
Last Updated 20 ಜನವರಿ 2026, 2:30 IST
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ ಇಂಜಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ ಇಂಜಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು   

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಬಸವೇಶ್ವರ ಚಾರಿಟಬಲ್ ಟ್ರಸ್ಟ್, ಬಸವೇಶ್ವರ ದೇವಸ್ಥಾನ ಬಸವನ ಮೂಲ ಕುಲ್ಕುಂದ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಸುಬ್ರಹ್ಮಣ್ಯ ಮಠ, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ಮಿಶ್ರತಲಿ ಹೆಣ್ಣು ಕರಗಳ ಪ್ರದರ್ಶನ ಹಾಗೂ ವಿಚಾರಗೋಷ್ಠಿ ಪರಿಕರಗಳ ಪ್ರಾತ್ಯಕ್ಷಿತ ಬಸವೇಶ್ವರ ದೇವಸ್ಥಾನ ಬಸವನ ಮೂಲ ಕುಲ್ಕುಂದದಲ್ಲಿ ಸೋಮವಾರ ನಡೆಯಿತು.

ದೇವಳದ ಪ್ರಧಾನ ಅರ್ಚಕ ಗಣೇಶ ದೀಕ್ಷಿತ್ ಅವರು ಗೋವುಗಳಿಗೆ ಪೂಜೆ ಸಲ್ಲಿಸಿದರು. ಪ್ರದರ್ಶನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಭರತ್ ನೆಕ್ರಾಜೆ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕಲ್ಲಾಜೆ ವಹಿಸಿದ್ದರು.

ಸಭಾ ಕಾರ್ಯಕ್ರಮವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ ಇಂಜಾಡಿ ಉದ್ಘಾಟಿಸಿದರು.

ADVERTISEMENT

ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಅರುಣ ಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಸತೀಶ್ ರಾವ್ ಡಿ.ಆರ್., ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂದ, ಉಪಾಧ್ಯಕ್ಷ ರವೀಂದ್ರ ಕುಮಾರ ರುದ್ರಪಾದ, ಕಡಬ ಕೆಡಿಪಿ ಸದಸ್ಯ ಶಿವರಾಮ ರೈ, ಮಾಸ್ಟರ್ ಪ್ಲಾನ್ ಸದಸ್ಯ ಪವನ್, ಸುಬ್ರಹ್ಮಣ್ಯ ಬ್ಯಾಂಕ್ ಆಫ್ ಬರೋಡ ಮ್ಯಾನೇಜರ್ ಕೃಷ್ಣಪ್ರಸಾದ್, ಭಾಗವಹಿಸಿದ್ದರು.

ಸುಳ್ಯ ಪಶು ಆಸ್ಪತ್ರೆಯ ಆಡಳಿತ ಪಶುವೈದ್ಯಾಧಿಕಾರಿ ಡಾ.ನಿತಿನ್ ಪ್ರಭು, ಕಡಬ ಪಶು ಕಚೇರಿಯ ವಿಸ್ತರಣಾಧಿಕಾರಿ ನಿರಂಜನ್ ಬಿ.ಎಸ್. ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.

ವಿಶೇಷ ತಳಿಯ ಕರುಗಳ ಪ್ರದರ್ಶನದಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. 70 ಕರುಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು. ನಿರ್ಣಾಯಕರಾಗಿ ಡಾ.ಕೇಶವ ಸುಳ್ಳಿ, ಡಾ.ಮೇಘಶ್ರೀ ಪಾಲ್ಗೊಂಡಿದ್ದರು. 

ಸುಬ್ರಹ್ಮಣ್ಯ ಪಶು ವೈದ್ಯಕೀಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಲ್ಲಿಕಾ ಸ್ವಾಗತಿಸಿ ವಂದಿಸಿದರು. ಡಾ.ವೆಂಕಟಾಚಲಪತಿ ಸಹಕರಿಸಿದರು. ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ, ಕೃಷಿಕ ಪಟೇಲ್ ಕಿಶೋರ್ ಕುಮಾರ್ ಕೂಜುಗೋಡು ಕಾರ್ಯಕ್ರಮ ನಿರೂಪಿಸಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ ಇಂಜಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.