ADVERTISEMENT

ಫಾಝಿಲ್‌ ಕೊಲೆ: ಕಾರ್ಯಕರ್ತರ ಮನೆಗೆ ನುಗ್ಗಿದರೆ ಧರಣಿ- ಶಾಸಕ ಭರತ್‌ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 20:04 IST
Last Updated 30 ಜುಲೈ 2022, 20:04 IST
ಶಾಸಕ ಭರತ್ ಶೆಟ್ಟಿ
ಶಾಸಕ ಭರತ್ ಶೆಟ್ಟಿ   

ಮಂಗಳೂರು: ‘ಫಾಝಿಲ್‌ಕೊಲೆಪ್ರಕರಣಕ್ಕೆಸಂಬಂಧಿಸಿದಂತೆ ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವುದನ್ನು ಬಿಟ್ಟು, ಅಮಾಯಕ ಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ‘ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ದೂರಿದ್ದಾರೆ.

‘ಸಾಕ್ಷ್ಯಾಧಾರಗಳು ನಿಮ್ಮ ಕೈಯ್ಯಲ್ಲಿವೆ. ಹಂತಕರನ್ನು ಬಂಧಿಸಿ. ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ. ಆದರೆ, ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ, ಅವರ ಕುಟುಂಬದಲ್ಲಿ ಭೀತಿ ಹುಟ್ಟಿಸಿದರೆನಗರ ಪೊಲೀಸ್‌ ಕಮಿಷನರ್‌ ಕಚೇರಿಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ. ಪೊಲೀಸರ ಅನುಚಿತ ವರ್ತನೆಯ ಬಗ್ಗೆ ಗೃಹ ಸಚಿವರಿಗೆ ದೂರು ನೀಡುತ್ತೇನೆ’ ಎಂದೂ ಅವರು ಹೇಳಿದ್ದಾರೆ.

ಶಾಸಕರ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌, ‘ನಮಗೆ ಆರೋಪಿಗಳಷ್ಟೇ ಮುಖ್ಯ. ನಾವು ಅವರು ಯಾವ ಸಂಘಟನೆಯವರು ಎಂದೆಲ್ಲಾ ನೋಡಲು ಹೋಗುವುದಿಲ್ಲ‘ ಎಂದು
ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.