ADVERTISEMENT

ಕಾರ್ಮಿಕರಿಗೆ ಮೋದಿ ಕಿಟ್‌ ವಿತರಣೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 16:56 IST
Last Updated 4 ಏಪ್ರಿಲ್ 2020, 16:56 IST
ಮಂಗಳೂರಿನಲ್ಲಿ ಶನಿವಾರ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದವರಿಗೆ ಶಾಸಕ ವೇದವ್ಯಾಸ ಕಾಮತ್‌, ಮೋದಿ ಕಿಟ್‌ ವಿತರಿಸಿದರು.
ಮಂಗಳೂರಿನಲ್ಲಿ ಶನಿವಾರ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದವರಿಗೆ ಶಾಸಕ ವೇದವ್ಯಾಸ ಕಾಮತ್‌, ಮೋದಿ ಕಿಟ್‌ ವಿತರಿಸಿದರು.   

ಮಂಗಳೂರು: ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯಲ್ಲಿರುವ ಕಾರ್ಮಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ₹ 500 ಮೌಲ್ಯದ ಆಹಾರ ಪದಾರ್ಥಗಳ ಮೋದಿ ಕಿಟ್‌ ಅನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಂಸದ ನಳಿನ್‌ಕುಮಾರ್ ಶನಿವಾರ ವಿತರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ‘ಪ್ರಾರಂಭದ ಹಂತದಲ್ಲಿ ಪ್ರತಿ ವಾರ್ಡ್‌ಗೆ ಕನಿಷ್ಠ 100 ಮೋದಿ ಕಿಟ್ ವಿತರಿಸಲಾಗುತ್ತದೆ. ಮೊದಲನೇ ಹಂತದಲ್ಲಿ 400 ಸಾವಿರ ಕಿಟ್‌ಗಳನ್ನು ಒದಗಿಸುವ ಆಲೋಚನೆ ಇದೆ. ಜಿಲ್ಲಾಡಳಿತದ ಸಹಯೋಗದೊಂದಿಗೆ ಬಡ ಜನರಿಗೆ ಆಹಾರ ಪೂರೈಸಲು ಬದ್ಧರಾಗಿದ್ದೇವೆ’ ಎಂದು ತಿಳಿಸಿದರು.

ಲಾಕ್‌ಡೌನ್‌ನಿಂದಾಗಿ ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ವರ್ಗದ ಜನರು ಆಹಾರದ ಸಮಸ್ಯೆ ಎದುರಿಸಬಾರದು ಎನ್ನುವ ನಿಟ್ಟಿನಲ್ಲಿ ಸೇವಾ ತಂಡವನ್ನು ರಚಿಸಿದ್ದೇವೆ. ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಮಹಾನಗರ ಪಾಲಿಕೆ ಸದಸ್ಯರನ್ನು ಒಳಗೊಂಡ ತಂಡವು ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿವೆ ಎಂದು ಹೇಳಿದರು.

ADVERTISEMENT

ಈ ಸಂದರ್ಭದಲ್ಲಿ ಮೇಯರ್‌ ದಿವಾಕರ್ ಪಾಂಡೇಶ್ವರ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ಸುಧೀರ್ ಶೆಟ್ಟಿ ಕಣ್ಣೂರು, ರವಿಶಂಕರ್ ಮಿಜಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.