ಪುತ್ತೂರು: ‘ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ಸದನದಲ್ಲಿ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ’ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು.
‘ಹಲವು ಸಂಘಟನೆಗಳು ವಕ್ಫ್ ಕಾಯ್ದೆಯನ್ನು ಸುಪ್ರಿಂಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಯಾವುದೇ ಒಂದು ಕಾಯ್ದೆಯನ್ನು ಜಾರಿ ಮಾಡುವಾಗ ಆ ಧರ್ಮದವರ ಅಭಿಪ್ರಾಯ ಪಡೆದುಕೊಳ್ಳಬೇಕು. ಆದರೆ ವಕ್ಫ್ ವಿಚಾರದಲ್ಲಿ ಆ ಧರ್ಮದ ವಿರೋಧವಿದ್ದರೂ ಅದನ್ನು ಜಾರಿಗೊಳಿಸಲಾಗಿದೆ. ಇದು ಖಂಡನೀಯ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.