ಉಜಿರೆ: ಶಾಸಕ ಸುರೇಶ್‌ಕುಮಾರ್ ಅವರು ಬೆಳ್ತಂಗಡಿ ತಾಲ್ಲೂಕಿನ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಂಜಾರುಮಲೆಗೆ ಭೇಟಿ ನೀಡಿ ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನ ಮಾಡಿರುವುದಕ್ಕೆ ಮತದಾರರನ್ನು ಅಭಿನಂದಿಸಿದರು.
ಗ್ರಾಮದಿಂದ ಹೊರಗೆ ವಾಸಿಸುತ್ತಿರುವ ವ್ಯಕ್ತಿಗಳೂ ಬಂದು ಮತದಾನ ಮಾಡಿರುವುದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿ ಶೀಘ್ರವೇ ಪರಿಹರಿಸುವ ಭರವಸೆ ನೀಡಿದರು. ಗ್ರಾಮದ ಯುವಕರನ್ನು ಅವರು ಅಭಿನಂದಿಸಿದರು.
ಸ್ಥಳೀಯರಾದ ಲೋಕೇಶ್, ಸುಜಿತ್, ಲಕ್ಷ್ಮಣ, ರಮೇಶ್, ಚಂದ್ರಶೇಖರ್, ವಿಘ್ನೇಶ್, ಶೇಖರ್, ವಿಶ್ವನಾಥ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.