ADVERTISEMENT

ಬೆಡ್‌ ಬ್ಲಾಕಿಂಗ್; ನ್ಯಾಯಮೂರ್ತಿಯಿಂದ ತನಿಖೆ ಮಾಡಿ

​ಪ್ರಜಾವಾಣಿ ವಾರ್ತೆ
Published 8 ಮೇ 2021, 5:07 IST
Last Updated 8 ಮೇ 2021, 5:07 IST
ಬಿ.ಎಂ. ಫಾರೂಕ್‌
ಬಿ.ಎಂ. ಫಾರೂಕ್‌   

ಮಂಗಳೂರು: ಬೆಂಗಳೂರಿನ ವಾರ್ ರೂಂನಲ್ಲಿ ಬೆಡ್ ಬ್ಲಾಕಿಂಗ್ ಜಾಲ ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ವಾರ್ ರೂಂಗಳನ್ನು ತಕ್ಷಣ ರದ್ದು ಮಾಡಬೇಕು. ಹಗರಣದ ಕುರಿತು ಹೈಕೋರ್ಟ್‌ ನ್ಯಾಯಮೂರ್ತಿಯಿಂದ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಎಂ. ಫಾರೂಕ್‌ ಒತ್ತಾಯಿಸಿದ್ದಾರೆ.

ಬುಧವಾರ ರಾತ್ರಿಯೂ ಬೆಡ್‌ ಬ್ಲಾಕಿಂಗ್ ನಡೆದಿರುವ ಬಗ್ಗೆ ಸಾಕ್ಷಿಗಳಿವೆ. ವಾರ್‌ ರೂಂ ನೌಕರರನ್ನು ತಕ್ಷಣ ವಜಾ ಮಾಡಬೇಕು. ಬೆಂಗಳೂರಿನ 12 ಕ್ಕೂ ಹೆಚ್ಚು ಆಸ್ಪತ್ರೆಗಳು ಇದರಲ್ಲಿ ಶಾಮೀಲಾಗಿವೆ ಎನ್ನಲಾಗುತ್ತಿದೆ. ಈ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ನಿತ್ಯ 1,792 ಟನ್ ಆಮ್ಲಜನಕ ಅಗತ್ಯವಿದೆ. ಚಾಮರಾಜನಗರ, ಕಲಬುರ್ಗಿ, ವಿಜಯಪುರ, ಹುಬ್ಬಳ್ಳಿ ಸೇರಿದಂತೆ ವಿವಿಧೆಡೆ ಆಮ್ಲಜನಕ ಇಲ್ಲದೇ ರೋಗಿಗಳು ಮೃತಪಟ್ಟಿದ್ದಾರೆ. ಕೇಂದ್ರದಿಂದ ಬರಬೇಕಾದ ಆಮ್ಲಜನಕ ತರುವಲ್ಲಿ ವಿಫಲರಾಗಿರುವ ರಾಜ್ಯದ ಸಂಸದರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.